ಹಳ್ಳೂರ, ಏ.6: ಅರಭಾವಿ ವಿಧಾನಸಭಾ ಕ್ಷೇತ್ರದ ಹಳ್ಳೂರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಪರವಾಗಿ ಪ್ರಚಾರ ನಡೆಸಿದರು. ಮೃಣಾಲ್ ಹೆಬ್ಬಾಳ್ಕರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ರೋಹಿಣಿ ಪಾಟೀಲ್, ಮುಖಂಡರಾದ ಅನಿಲ ದಳವಾಯಿ, ಭೀಮಪ್ಪ ಹಂದಿಗುಂದ, ಲಕಣ್ಣ ಸವಸುದ್ದಿ, ಸುರೇಶ ಮಗದುಮ್, ಮುಂತಾದವರು ಉಪಸ್ಥಿತರಿದ್ದರು.
ಅರಭಾವಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
ಅರಭಾವಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
Date: