Sunday, January 19, 2025
Sunday, January 19, 2025

ಲೋಕಸಭೆ ಚುನಾವಣೆಗೆ ಮಂಗಳೂರಿನಿಂದ ಕಾಂಗ್ರೆಸ್ ರಣಕಹಳೆ

ಲೋಕಸಭೆ ಚುನಾವಣೆಗೆ ಮಂಗಳೂರಿನಿಂದ ಕಾಂಗ್ರೆಸ್ ರಣಕಹಳೆ

Date:

ಅಡ್ಯಾರು, ಫೆ.18: ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿದರು. ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಶೋಭಾ ಕರಂದ್ಲಾಜೆ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಬೇಕು. ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ. ಮೋದಿ ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗುವ, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ? ದಕ್ಷಿಣ ಕನ್ನಡದ ಜನತೆಗೆ ರಾಜಕೀಯ ಪ್ರಜ್ಞಾವಂತಿಕೆ ಹೆಚ್ಚಾಗಿದೆ. ಸತ್ಯ ಹೇಳುವವರು ಮತ್ತು ಸುಳ್ಳು ಹೇಳುವವರು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳುವ ಪ್ರಜ್ಞಾವಂತಿಕೆಯೂ ಇದೆ. ಈ ಕಾರಣಕ್ಕೆ ಮಂಗಳೂರಿನಲ್ಲೇ ಮೊದಲ ಸಭೆ ಮಾಡುವ ಮೂಲಕ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ್ದೇವೆ. ಜಾತಿ-ಜಾತಿಗಳ ಮಧ್ಯೆ, ಧರ್ಮ-ಧರ್ಮಗಳ ಮಧ್ಯೆ ಕಿತ್ತಾಟ, ಜಗಳ ತಂದಿಟ್ಟಿರುವುದು ಬಿಟ್ಟರೆ ಜನ ಸಾಮಾನ್ಯರ ಬದುಕಿಗೆ ಅನುಕೂಲ ಆಗುವ ಒಂದೇ ಒಂದು ಕಾರ್ಯಕ್ರಮವನ್ನು ಕಳೆದ ಹತ್ತು ವರ್ಷಗಳಲ್ಲಿ ಜಾರಿ ಆಗಿದೆಯಾ? ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಆಯ್ತಾ? ಅಡುಗೆ ಗ್ಯಾಸ್ ಬೆಲೆ ಕಡಿಮೆ ಆಗಿದೆಯಾ? ಕಪ್ಪು ಹಣ ವಾಪಾಸ್ ಬಂದಿದೆಯಾ? ಮೋದಿ ಅವರು ಹೇಳಿದ್ದ ಅಚ್ಛೆ ದಿನ್ ಯಾರಿಗಾದರೂ ಬಂದಿದೆಯಾ? 2013-18 ರ ವರೆಗೆ ನಾವು ಕೊಟ್ಟ ಭರವಸೆಗಳಲ್ಲಿ ಶೇ.98 ರಷ್ಟನ್ನು ಈಡೇರಿಸಿದೆವು. ಈ ಬಾರಿ ಚುನಾವಣೆ ವೇಳೆ 5 ಗ್ಯಾರಂಟಿಗಳ ಜೊತೆಗೆ ಹಲವು ಭರವಸೆ ನೀಡಿದ್ದೆವು. ಕೇವಲ 8 ತಿಂಗಳಲ್ಲಿ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನೂ ಜಾರಿ ಮಾಡಿ ಇಡೀ ದೇಶಕ್ಕೆ ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಪಿ.ಸಿ.ಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀನಿವಾಸ್ ಬಿ.ವಿ., ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಸಚಿವರುಗಳಾದ ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಕೆ.ಹೆಚ್.ಮುನಿಯಪ್ಪ, ಕೆ.ವೆಂಕಟೇಶ್, ನಾಗೇಂದ್ರ, ಬೈರತಿ ಸುರೇಶ್, ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಮೋಟಮ್ಮ, ಆರ್.ವಿ. ದೇಶಪಾಂಡೆ, ಕಿಮ್ಮನೆ ರತ್ನಾಕರ್, ರಮಾನಾಥ ರೈ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಕೆಪಿಸಿಸಿ ಸಂವಹನ ವಿಭಾಗದ ಲಾವಣ್ಯ ಬಲ್ಲಳ್, ಮಿಥುನ್ ರೈ, ಸೇರಿದಂತೆ ಮುಂತಾದವರು ವೇದಿಕೆಯಲ್ಲಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!