Sunday, February 2, 2025
Sunday, February 2, 2025

ರಾಜಕೀಯ ದುರುದ್ದೇಶದಿಂದ ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಟೀಕೆ: ವಿಜಯೇಂದ್ರ

ರಾಜಕೀಯ ದುರುದ್ದೇಶದಿಂದ ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಟೀಕೆ: ವಿಜಯೇಂದ್ರ

Date:

ಬೆಂಗಳೂರು, ಫೆ.1: ಕೇಂದ್ರ ಸರ್ಕಾರವು ಔಷಧಿಗಳು, ಎಲೆಕ್ಟ್ರಿಕ್, ಚರ್ಮ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಇಳಿಸಿ ವಿಕಸಿತ ಭಾರತ ಕಟ್ಟುವ ದೂರದೃಷ್ಟಿಯ ಬಜೆಟ್ ಮಂಡಿಸಿರುವ ಕೇಂದ್ರ ಸರ್ಕಾರವನ್ನು ಟೀಕಿಸುವುದು ಕೇವಲ ರಾಜಕೀಯ ದುರುದ್ದೇಶದಿಂದ ಮಾತ್ರ ಎಂಬುದು ರಾಜ್ಯದ ಜನತೆಗೆ ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಶನಿವಾರ ಮಂಡನೆಯಾದ ಕೇಂದ್ರ ಬಜೆಟ್ ಕುರಿತು ಅವರು ಮಾತನಾಡಿದರು. ಮಧ್ಯಮ ವರ್ಗದವರಿಗೆ ನೆರವಾಗುವ ನಿಟ್ಟಿನಲ್ಲಿ 12 ಲಕ್ಷದವರೆಗೆ ತೆರಿಗೆ ಪಾವತಿಯಲ್ಲಿ ವಿನಾಯಿತಿ ನೀಡಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಮಿತಿಯನ್ನು ಈಗ ಇರುವ 3 ಲಕ್ಷ ರೂಪಾಯಿಗಳಿಂದ 5 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಕಿಸಾನ್ ಕ್ರೆಡಿಟ್‌ಗಳಿಂದ 7 ಕೋಟಿಗೂ ಅಧಿಕ ರೈತರಿಗೆ ಸುಲಭವಾಗಿ ಸಾಲ ಸೌಲಭ್ಯಗಳು ದೊರೆಯಲಿವೆ ಇದು ನಾಡಿನ ರೈತರಿಗಾಗುವ ಅನುಕೂಲವಲ್ಲವೇ?

ಬೆಳೆಗಳ ಉತ್ಪಾದಕತೆ ವೃದ್ಧಿಸುವ ಸಲುವಾಗಿ ಪ್ರಧಾನಮಂತ್ರಿ ಧನ-ಧಾನ್ಯ ಯೋಜನೆ ಆರಂಭಿಸುವ ನಿರ್ಧಾರ ಕೈಗೊಂಡಿದ್ದು ಈ ಯೋಜನೆ 1.7 ಕೋಟಿ ರೈತರಿಗೆ ಪ್ರಯೋಜನ ನೀಡಲಿದೆ ಇದು ನಮ್ಮ ಅನ್ನದಾತರಿಗಾಗುವ ಅನುಕೂಲವಲ್ಲವೇ? ‘ಉದ್ಯಮಕ್ಕೆ ಶಕ್ತಿ ತುಂಬಲು ಹೊಸ ಸ್ಟಾರ್ಟ್‌ಅಪ್‌ಗಳಿಗೆ ವಿಶೇಷ ನಿಧಿ’ ಸ್ಥಾಪನೆಗೆ ಮುಂದಾಗಿದ್ದು ಪ್ರಸ್ತುತ ಕೇಂದ್ರ ಸರ್ಕಾರ ನೀಡುತ್ತಿರುವ ರೂ.10,000 ಕೋಟಿ ಜೊತೆಗೆ ಹೊಸದಾಗಿ ರೂ.10,000 ಕೋಟಿ ಹೆಚ್ಚುವರಿ ಅನುದಾನ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 5 ಲಕ್ಷ ಮಹಿಳೆಯರಿಗೆ ಹೊಸ ಉದ್ಯಮ ಸ್ಥಾಪನೆಗೆ ಯೋಜನೆ ಆರಂಭಿಸಿರುವುದು ನಾಡಿನ ಪರಿಶಿಷ್ಟ ಮಹಿಳೆಯರ ಸ್ವಾವಲಂಬಿ ಬದುಕು ಕಟ್ಟಿಕೊಡುವ ಯೋಜನೆಯಲ್ಲವೇ?

ಇನ್ನಾದರೂ ರಾಜ್ಯದ ಕಾಂಗ್ರೆಸ್ ಸರ್ಕಾರ ಕೇಂದ್ರದ ಜನಪರ ನಿಲುವುಗಳನ್ನು ಟೀಕಿಸುವ ಬದಲು ಸಮೃದ್ಧ ಕರ್ನಾಟಕ ಕಟ್ಟಲೂ ಬರಪೂರ ಯೋಜನೆಗಳನ್ನು ನೀಡುತ್ತಿರುವ ಮೋದಿ ಸರ್ಕಾರದೊಂದಿಗೆ ವಿಶ್ವಾಸಪೂರ್ಣ ಸಹಕಾರದ ಹೆಜ್ಜೆ ಹಾಕಲಿ ಎಂದು ವಿಜಯೇಂದ್ರ ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಅವಧಿ ಮುಗಿದಿರುವ ಬ್ಯಾನರ್ /ಕಟೌಟ್‌ಗಳ ತೆರವಿಗೆ ಸೂಚನೆ

ಉಡುಪಿ, ಫೆ.1: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಖಾಯಂ ಜಾಹೀರಾತು ಫಲಕಗಳಲ್ಲಿ...

ವಿಕಸಿತ ಭಾರತದ ಸದೃಢ ಆರ್ಥಿಕತೆಗೆ ಮುನ್ನುಡಿ ಬರೆಯಲಿರುವ ಬಜೆಟ್: ಯಶ್ಪಾಲ್ ಸುವರ್ಣ

ಉಡುಪಿ, ಫೆ.1: ಕಳೆದ ಹತ್ತು ವರ್ಷಗಳಿಂದ ನಿರಂತರ ಪ್ರಗತಿ ಸಾಧಿಸುತ್ತಾ ವಿಶ್ವದ...

ಮಧ್ಯಮ ವರ್ಗದವರಿಗೆ ಸಂತೃಪ್ತಿ ತಂದ ಬಜೆಟ್

ಈ ಬಾರಿಯ ಕೇಂದ್ರ ಸರ್ಕಾರ ಮಂಡಿಸಿದ ಆಯ ವ್ಯಯ ಲೆಕ್ಕಾಚಾರ ಬಹುಮುಖ್ಯವಾಗಿ...

ಬಜೆಟ್ ನಲ್ಲಿ ರಾಜ್ಯವನ್ನು ನಿರ್ಲಕ್ಷಿಸಲಾಗಿದೆ: ಉಡುಪಿ ಬ್ಲಾಕ್ ಕಾಂಗ್ರೆಸ್

ಉಡುಪಿ, ಫೆ.1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ...
error: Content is protected !!