Monday, February 24, 2025
Monday, February 24, 2025

ಮೈಸೂರಿನಲ್ಲಿ ಕಾಂಗ್ರೆಸ್ ನ ಬೃಹತ್ ಜನಾಂದೋಲನ ಸಮಾವೇಶ

ಮೈಸೂರಿನಲ್ಲಿ ಕಾಂಗ್ರೆಸ್ ನ ಬೃಹತ್ ಜನಾಂದೋಲನ ಸಮಾವೇಶ

Date:

ಮೈಸೂರು, ಆ.9: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬಿಜೆಪಿ-ಜೆಡಿಎಸ್ ಪಾದಯಾತ್ರೆಯ ವಿರುದ್ಧ ‘ಸತ್ಯ ಮೇವ ಜಯತೆ’ ಬೃಹತ್ ಜನಾಂದೋಲನ ಕಾರ್ಯಕ್ರಮ ನಡೆಯಿತು. ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ. ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ದೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ.

ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ.

ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983 ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250 ರೂ ಡೆಪಾಸಿಟ್ ಕಟ್ಟಿದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದರು. ಆ ಚುನಾವಣೆಯಲ್ಲಿ ಜನರೇ 63 ಸಾವಿರ ರೂಪಾಯಿ ಖರ್ಚು ಮಾಡಿ ನನ್ನನ್ನು ಆರಿಸಿದರು. ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಸಚಿವ ಸಂಪುಟದ ಎಲ್ಲ ಸಚಿವರು, ಪಕ್ಷದ ಶಾಸಕರು, ಸಂಸದರು, ಪಕ್ಷದ ಕಾರ್ಯಾಧ್ಯಕ್ಷರು, ಎಲ್ಲ ಘಟಕಗಳ ಅಧ್ಯಕ್ಷರು, ಇನ್ನಿತರ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!