ಬೆಂಗಳೂರು, ಫೆ.9: ನಮ್ಮ ಮೆಟ್ರೋದ ಹೊಸ ಯೋಜನೆಗಳಲ್ಲಿ ಸುಮಾರು 40 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ನಿರ್ಮಾಣ ಮಾಡಲಾಗುವುದು. ರಸ್ತೆ ವಿಸ್ತರಣೆಗೆ ಭೂಸ್ವಾಧೀನ ಸಾಧ್ಯವಿಲ್ಲವಾದ್ದರಿಂದ ಮುಂದೆ ನಿರ್ಮಾಣವಾಗುವ ನಮ್ಮ ಮೆಟ್ರೋ ಮಾರ್ಗದಲ್ಲಿ ಡಬಲ್ ಡೆಕ್ಕರ್ ಕಡ್ಡಾಯಗೊಳಿಸಲಾಗಿದೆ. ಇದರ ವೆಚ್ಚವನ್ನು ಬಿಬಿಎಂಪಿ ಹಾಗೂ ಬಿಎಂಆರ್‌ಸಿಎಲ್ ಸಮನಾಗಿ ಭರಿಸಲಿವೆ. ಇದೀಗ ಉದ್ದೇಶಿಸಿರುವ ಡಬಲ್ ಡೆಕ್ಕರ್‌ಗೆ ರೂ.9,800 ಕೋಟಿ ವೆಚ್ಚವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮೆಟ್ರೋ ಮಾರ್ಗದಲ್ಲಿ ಡಬಲ್ ಡೆಕ್ಕರ್ ನಿರ್ಮಾಣ

ಮೆಟ್ರೋ ಮಾರ್ಗದಲ್ಲಿ ಡಬಲ್ ಡೆಕ್ಕರ್ ನಿರ್ಮಾಣ
Date: