ಉಡುಪಿ, ಆ.30: ಮೈಸೂರು ರಂಗಾಯಣವು ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ ಅಧಿಕೃತ ರೆಪರ್ಟರಿಯಾಗಿದ್ದು, ರಂಗ ಶಿಕ್ಷಣ, ರಂಗ ತರಬೇತಿ, ನಾಟಕಗಳ ಸಿದ್ಧತೆ, ಪ್ರದರ್ಶನ, ರಂಗ ಶಿಬಿರಗಳು ಸೇರಿದಂತೆ ಸಂಪೂರ್ಣ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಆಸಕ್ತ 22 ರಿಂದ 35 ವರ್ಷದೊಳಗಿನ ಕಲಾವಿದರಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 5 ರ ವರೆಗೆ ವಿಸ್ತರಿಸಲಾಗಿದೆ.
ರಾಷ್ಟ್ರೀಯ ನಾಟಕ ಶಾಲೆಯ ಪದವಿ/ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗ ಶಿಕ್ಷಣ ಪದವಿ/ಡಿಪ್ಲೊಮೋ/ರಾಜ್ಯ ಸರ್ಕಾರ ಅಂಗೀಕೃತ ವಿಶ್ವವಿದ್ಯಾಲಯದಿಂದ ನಾಟಕ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ರಂಗಾಯಣ, ವಿನೋಬಾ ರಸ್ತೆ, ಮೈಸೂರು ದೂ.ಸಂಖ್ಯೆ: ದೂರವಾಣಿ ಸಂಖ್ಯೆ: 0821-2512639, 2512629 ಅಥವಾ ರಂಗಾಯಣದ ವೆಬ್‌ಸೈಟ್:
http://rangayanamysore.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.