Monday, September 7, 2026
Monday, September 7, 2026

ದೀಪಿಕಾ ವಿದ್ಯಾರ್ಥಿ ವೇತನ; ಅಜೀಂ ಪ್ರೇಮ್‌ಜಿ ಫೌಂಡೇಶನ್‌, ಶಿಕ್ಷಣ ಇಲಾಖೆಯ ಆರ್ಥಿಕ ನೆರವು

ದೀಪಿಕಾ ವಿದ್ಯಾರ್ಥಿ ವೇತನ; ಅಜೀಂ ಪ್ರೇಮ್‌ಜಿ ಫೌಂಡೇಶನ್‌, ಶಿಕ್ಷಣ ಇಲಾಖೆಯ ಆರ್ಥಿಕ ನೆರವು

Date:

ಬೆಂಗಳೂರು, ಸೆ.21: ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರತಿ ವರ್ಷ ವಿದ್ಯಾರ್ಥಿವೇತನ ನೀಡಲು ಅಜೀಂ ಪ್ರೇಮ್‌ಜಿ ಫೌಂಡೇಶನ್‌ ಹಾಗೂ ಉನ್ನತ ಶಿಕ್ಷಣ ಇಲಾಖೆ ʼದೀಪಿಕಾ ವಿದ್ಯಾರ್ಥಿ ವೇತನʼ ಕಾರ್ಯಕ್ರಮ ರೂಪಿಸಿದೆ.

ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವ ರಾಜ್ಯದ ಹೆಣ್ಣುಮಕ್ಕಳಿಗೆ ಇನ್ನು ಮುಂದೆ ಅಜೀಂ ಪ್ರೇಮ್‌ಜಿ ಫೌಂಡೇಶನ್‌ ಆರ್ಥಿಕ ನೆರವು ನೀಡಲಿದ್ದು, ಅದಕ್ಕಾಗಿ ರೂ. 2,000 ಕೋಟಿ ಹಾಗೂ ರಾಜ್ಯ ಸರ್ಕಾರ ರೂ. 200 ಕೋಟಿ ಒದಗಿಸಿದೆ. ಯೋಜನೆಯ ಮೂಲಕ ಪ್ರತಿ ವಿದ್ಯಾರ್ಥಿನಿಗೆ ಪದವಿ ಶಿಕ್ಷಣ ಮುಗಿಯುವವರೆಗೆ ವಾರ್ಷಿಕ ರೂ. 30,000 ಸಿಗಲಿದ್ದು, ಶೈಕ್ಷಣಿಕ ಉದ್ದೇಶ ಹಾಗೂ ಪೂರಕ ಕಾರಣಗಳಿಗೆ ಬಳಸಿಕೊಳ್ಳಬಹುದು.

ಸರ್ಕಾರಿ ಶಾಲೆಗಳಲ್ಲಿ 10ನೇ ತರಗತಿ ಹಾಗೂ ದ್ವಿತೀಯ ಪಿಯು ಉತ್ತೀರ್ಣರಾಗಿ 2025- 26ನೇ ಸಾಲಿನಲ್ಲಿ ಸಾಮಾನ್ಯ ಪದವಿ ಅಥವಾ ವೃತ್ತಿ ಶಿಕ್ಷಣ ಪದವಿಗೆ ಸೇರುವ 37,000 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನದ ನೆರವು ಸಿಗಲಿದೆ. ಅರ್ಹ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾದರೆ, ಆ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!