ಕಾರವಾರ: ಎರಡು ದಿನ ರಾಜ್ಯ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಕಾರವಾರ ನೌಕಾನೆಲೆಯಲ್ಲಿ ಭಾರತೀಯ ನೌಕಾಪಡೆಯ ಸಿಬ್ಬಂದಿಗಳ ಜೊತೆಗೆ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಗುರುವಾರ ರಾತ್ರಿ ಅವರು ನೌಕಾಪಡೆಯ ಸಿಬ್ಬಂದಿಗಳು ಹಾಗೂ ಅವರ ಕುಟುಂಬದವರೊಂದಿಗೆ ಸಂವಾದ ನಡೆಸಿದರು.
ಕಾರವಾರದ ನೌಕಾ ನೆಲೆಯಲ್ಲಿ ಭಾರತೀಯ ನೌಕಾಪಡೆಯ ಸಿಬ್ಬಂದಿ ಮತ್ತು ಅವರ ಕುಟುಂಬದೊಂದಿಗೆ ಸಂವಾದ ನಡೆಸಲು ಸಂತೋಷವಾಯಿತು. ನಮ್ಮ ರಕ್ಷಣಾ ಸಿಬ್ಬಂದಿ ದೇಶಕ್ಕೆ ಶ್ರದ್ಧೆಯಿಂದ ಸೇವೆ ಸಲ್ಲಿಸುತ್ತಾರೆ ಮತ್ತು ನಮ್ಮ ದೇಶವನ್ನು ಸುರಕ್ಷಿತವಾಗಿರಿಸುತ್ತಾರೆ. ಅವರ ಕುಟುಂಬದ ಸದಸ್ಯರು ಕೂಡ ಅವರಿಗೆ ಬೆಂಬಲ ಮತ್ತು ಶಕ್ತಿಯನ್ನು ನೀಡುವ ಮೂಲಕ ದೇಶಸೇವೆ ಮಾಡುತ್ತಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.