ಬೆಳಗಾವಿ, ಡಿ.15: ಪ್ರವಾಸೋದ್ಯಮ ನೀತಿ 2020-26ರ ಅನ್ವಯ ರಾಜ್ಯದಲ್ಲಿ 810 ಪ್ರವಾಸಿ ತಾಣಗಳನ್ನು ಗುರುತಿಸಲಾಗಿದ್ದು, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ 44 ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸಿ ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಪ್ರಸ್ತುತ ಜಾರಿಗೆ ತಂದಿರುವ 2024-29ರ ನೂತನ ಕರ್ನಾಟಕ ಪ್ರವಾಸೋದ್ಯಮ ನೀತಿಯಲ್ಲಿ ಖಾಸಗಿ ಹೂಡಿಕೆದಾರರಿಗೆ ಸಹಾಯಧನ, ರಿಯಾಯಿತಿ ಮತ್ತು ಉತ್ತೇಜನಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಅವರು ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.
ಪ್ರವಾಸಿ ತಾಣಗಳ ಅಭಿವೃದ್ಧಿ: ಎಚ್.ಕೆ. ಪಾಟೀಲ್
ಪ್ರವಾಸಿ ತಾಣಗಳ ಅಭಿವೃದ್ಧಿ: ಎಚ್.ಕೆ. ಪಾಟೀಲ್
Date: