Thursday, September 10, 2026
Thursday, September 10, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

Date:

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ. ಅವರೆಲ್ಲರನ್ನೂ ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ.

ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿಜಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಾಂತಿಯುತ ಹೋರಾಟವನ್ನು ನಡೆಸಿದ ವಿದ್ಯಾರ್ಥಿ-ಯುವಜನರು ದೇಶದಲ್ಲಿ ಹೊಸ ಭರವಸೆಯನ್ನು ಮೂಡಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಕಾಲದ ಕರೆಗೆ ಓಗೊಟ್ಟು ಒಂದು ಜವಾಬ್ದಾರಿಯುತ ವಿರೋಧ ಪಕ್ಷದ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದೆ. ಸಕಾಲದಲ್ಲಿ ದೃಢಚಿತ್ತದ ನಾಯಕತ್ವ ನೀಡಿ ಹೋರಾಟವನ್ನು ಮುನ್ನಡೆಸಿದ ರಾಹುಲ್ ಗಾಂಧಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ.

ಶಿಕ್ಷಣ ಸಚಿವರ ರಾಜೀನಾಮೆಯಿಂದ ಶಿಕ್ಷಣ ಕ್ಷೇತ್ರದ ಸರ್ವ ಸಮಸ್ಯೆಗಳು ಪರಿಹಾರವಾಗಲಾರದು. ಸರ್ವಾಧಿಕಾರ ಮತ್ತು ದುರಾಡಳಿತದ ಶಾಲೆಯ ಗುರುಗಳು ಕುರ್ಚಿಯಲ್ಲಿ ಭದ್ರವಾಗಿ ಕುಳಿತಿರುವಾಗ ಇಂತಹ ಶಿಷ್ಯರ ನಿರ್ಗಮನದಿಂದ ಶಾಲೆಯ ಸುಧಾರಣೆಯಾಗಲಾರದು. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ಸದಾ ಜನರ ಜೊತೆಗೆ ಇರುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ...

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...
error: Content is protected !!