ಧಾರವಾಡ, ನ.4: ಧಾರವಾಡ ಕೃಷಿ ಮಹಾವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ಜೂನಿಯರ್ ರಿಸರ್ಚ್ ಫೆಲೋ ತಾತ್ಕಾಲಿಕ ಹುದ್ದೆಗಾಗಿ ಎಂ.ಎಸ್.ಸಿ (ಅಗ್ರಿ) ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ನವೆಂಬರ್ 20, 2026 ರಂದು ಬೆಳೆಗ್ಗೆ 11 ಗಂಟೆಗೆ ಸಹ ಸಂಶೋಧನಾ ನಿರ್ದೇಶಕರ ಕಛೇರಿ, ಕೃ.ವಿ,ವಿ ಧಾರವಾಡದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಆಸಕ್ತರು ತಮ್ಮ ವಿದ್ಯಾರ್ಹತೆಗೆ ಸಂಭಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಎರಡು ನಕಲು ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಕೃವಿವಿ ಧಾರವಾಡದ ಅಂತರಜಾಲ http://www.uasd.edu ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.




By
ForthFocus™