ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಸಕ್ತ ಸಾಲಿನ ನವೆಂಬರ್ ತಿಂಗಳಲ್ಲಿ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ, ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾಗುವ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯಲ್ಲಿ ಹಾಗೂ ಪ್ರಾಧಿಕಾರದ ವೆಬ್ಸೈಟ್ http://www.kannadapustakapradhikara.comನಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಆನ್ಲೈನ್ ಮೂಲಕ ಹಣ ಪಾವತಿಸಿ, ರಿಯಾಯಿತಿ ಮೂಲಕ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದ್ದು, ಪುಸ್ತಕ ಪ್ರಿಯರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.