Saturday, January 17, 2026
Saturday, January 17, 2026

3.20 ಲಕ್ಷ ರೈತರಿಗೆ ಕೃಷಿ ಸಲಕರಣೆಗಳ ವಿತರಣೆ

3.20 ಲಕ್ಷ ರೈತರಿಗೆ ಕೃಷಿ ಸಲಕರಣೆಗಳ ವಿತರಣೆ

Date:

ಬೆಳಗಾವಿ, ಡಿ.19: ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದ 3.20 ಲಕ್ಷ ರೈತರಿಗೆ ಅಂದಾಜು 1,250 ಕೋಟಿ ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ ಎಂದು ಕೃಷಿ ಸಚಿವರಾದ ಚಲುವರಾಯಸ್ವಾಮಿ ಹೇಳಿದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಬಸವರಾಜ ನೀಲಪ್ಪ ಶಿವಣ್ಣನವರ್ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಇತ್ತೀಚೆಗೆ ಕೃಷಿ ಕೂಲಿ ಕಾರ್ಮಿಕರ ಕೊರತೆ ಕಂಡುಬರುತ್ತಿದೆ. ಹೀಗಾಗಿ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಯಂತ್ರೋಪಕರಣಗಳನ್ನು ಬಳಸುವ ಕಡೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಸರ್ಕಾರವೂ ರೈತರ ಬೇಡಿಕೆಗಳಿಗೆ ಅನುಗುಣವಾಗಿ ಕೃಷಿ ಯಂತ್ರೋಪಕರಣಗಳನ್ನು ವಿತರಿಸುವ ಕೆಲಸಕ್ಕೆ ಆದ್ಯತೆ ನೀಡಿದೆ.

ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದ 3.20 ಲಕ್ಷ ರೈತರಿಗೆ ಅಂದಾಜು1,250 ಕೋಟಿ ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ. ಅಲ್ಲದೆ ಹೈಟೆಕ್ ಹಾರ್ವೆಸ್ಟ್ ಹಬ್ ಕಾರ್ಯಕ್ರಮದಡಿ127 ಕೋಟಿ ವೆಚ್ಚದಲ್ಲಿ 348 ರೈತರಿಗೆ ಉಪಯುಕ್ತ ಕೃಷಿ ಯಂತ್ರೋಪಕರಣ ವಿತರಿಸಲಾಗಿದೆ.

ಪ್ರಸಕ್ತ ವರ್ಷ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಡಿ ಒದಗಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಸೇರಿ ಒಟ್ಟು 428.82 ಕೋಟಿಗಳ ಅನುದಾನ ಮೀಸಲಿಟ್ಟಿದ್ದು, ಈಗಾಗಲೆ 319.57 ಕೋಟಿ ಅನುದಾನ ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗಿದೆ. ಈವರೆಗೆ 69,722 ರೈತರಿಗೆ 271.71 ಕೋಟಿಗಳ ಸಹಾಯಧನ ಒದಗಿಸಲಾಗಿದೆ. ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಕೇಂದ್ರ ಸರ್ಕಾರಕ್ಕೂ ಹೆಚ್ಚಿನ ಅನುದಾನ ಒದಗಿಸಲು ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ಸಚಿವರು ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!