Monday, November 25, 2024
Monday, November 25, 2024

ಭಯಪಡದಿರಿ, ಅದು ಪ್ಲಾಸ್ಟಿಕ್ ಅಕ್ಕಿಯಲ್ಲ; ಸಾರವರ್ಧಿತ ಅಕ್ಕಿ

ಭಯಪಡದಿರಿ, ಅದು ಪ್ಲಾಸ್ಟಿಕ್ ಅಕ್ಕಿಯಲ್ಲ; ಸಾರವರ್ಧಿತ ಅಕ್ಕಿ

Date:

ಬೆಂಗಳೂರು, ಆ.27: ಅನ್ನಭಾಗ್ಯದ ಪಡಿತರ ಅಕ್ಕಿಯಲ್ಲಿ ಸ್ವಲ್ಪ ಪ್ರಮಾಣದ ಅಕ್ಕಿ ನೀರಿನಲ್ಲಿ ಮುಳುಗದೆ ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ಅದು ಪ್ಲಾಸ್ಟಿಕ್‌ ಅಕ್ಕಿ ಎಂದು ಜನ ಗೊಂದಲಕ್ಕೆ ಈಡಾಗಿರುವುದು ವರದಿಯಾಗಿದೆ. ಆದರೆ ಇದು ಆತಂಕ ಪಡುವ ಸಂಗತಿಯಲ್ಲ. ನಿಮ್ಮ ಮನೆಗೆ ತಂದ ಅನ್ನಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್‌ ಅಕ್ಕಿಯಂತಹ ಕಾಳುಗಳು ಇದ್ದಲ್ಲಿ ಆತಂಕ ಪಡದಿರಿ ಮತ್ತು ಅದನ್ನು ಎಸೆಯದಿರಿ. ಏಕೆಂದರೆ ಅದು ಪ್ಲಾಸ್ಟಿಕ್‌ ಅಕ್ಕಿಯಲ್ಲ, ನಿಮ್ಮ ಆರೋಗ್ಯವನ್ನು ಉತ್ತಮವಾಗಿಸುವ ಪೌಷ್ಠಿಕಾಂಶವುಳ್ಳ ಸಾರವರ್ಧಿತ ಅಕ್ಕಿ.

ಕೇಂದ್ರ ಸರ್ಕಾರದ ಸಚಿವಾಲಯದ ಮಾರ್ಗಸೂಚಿಯಂತೆ ಪ್ರತಿ 1 ಕೆ.ಜಿ. ಅಕ್ಕಿಗೆ 10 ಗ್ರಾಂ. ನಷ್ಟು ಸಾರವರ್ಧಿತ ಅಕ್ಕಿಯನ್ನು ಬೆರೆಸಲಾಗುತ್ತದೆ. ಇದು ವ್ಯಕ್ತಿಯ ಆರೋಗ್ಯಕ್ಕೆ ಅಗತ್ಯವಾದ ಜೀವಸತ್ವಗಳು, ಸೂಕ್ಷ್ಮ ಪೋಷಕಾಂಶಗಳಾದ ಕಬ್ಬಿಣಾಂಶ, ಫೋಲಿಕ್‌ ಆಮ್ಲ ಮತ್ತು ವಿಟಮಿನ್‌ ಬಿ ಯನ್ನು ಒದಗಿಸುತ್ತದೆ. ಈ ಸಾರವರ್ಧಿತ ಅಕ್ಕಿಯು ನಿಮ್ಮ ಆರೋಗ್ಯವನ್ನು ಉತ್ತಮಗೊಳಿಸುತ್ತದೆ ಮತ್ತು ರಕ್ತಹೀನತೆ, ಅಪೌಷ್ಟಿಕತೆಯನ್ನು ಹೋಗಲಾಡಿಸುತ್ತದೆ. ಪ್ರಯೋಗಾಲಯದಿಂದ ಪರೀಕ್ಷೆಗೆ ಒಳಪಟ್ಟ ಸಾರವರ್ಧಿತ ಅಕ್ಕಿಯನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಬಳಕೆಗೆ ಯೋಗ್ಯವಾದ ಪೌಷ್ಠಿಕಾಂಶಭರಿತವಾದ ಅಕ್ಕಿ ಎಂದು ಪರಿಗಣಿಸಲಾಗಿರುತ್ತದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!