ವಿಜಯನಗರ, ಜ.28: ಮುಜುರಾಯಿ ಇಲಾಖೆಗೆ ಒಳಪಟ್ಟ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೆ ಬಂದಿದೆ. ಇನ್ನು ಮುಂದೆ ಬರ್ಮುಡ ಚಡ್ಡಿ, ಜೀನ್ಸ್ ಧರಿಸಿ ದೇವಸ್ಥಾನ ಪ್ರವೇಶಿಸುವ ಹಾಗಿಲ್ಲ. ಪಂಚೆ ತೊಡುವುದು ಕಡ್ಡಾಯ. ತುಂಡುಡುಗೆಯಲ್ಲಿ ಬರುವ ಹಾಗಿಲ್ಲ, ಶಲ್ಯ ತೊಡುವುದನ್ನು ಕಡ್ಡಾಯಗೊಳಿಸಲಾಗಿದೆ. ಪ್ರವಾಸಕ್ಕೆ ಬರುವವರು ದೇವಸ್ಥಾನಕ್ಕೆ ಭೇಟಿ ನೀಡುವಾಗ ಭಕ್ತಿ ಭಾವನೆ ಉದ್ದೀಪನೆಯ ಉಡುಪು ಧರಿಸಿ ದೇವರ ದರ್ಶನ ಪಡೆಯಬೇಕು. ಈ ಸದುದ್ದೇಶದಿಂದ ಈ ವಿಶೇಷ ಕ್ರಮ ವಹಿಸಿದ್ದೇವೆ ಎಂದು ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ತಿಳಿಸಿದ್ದಾರೆ.
ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ
ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ
Date: