Monday, September 23, 2024
Monday, September 23, 2024

ಪಡಿತರ ಚೀಟಿಗೆ ಇ-ಕೆವೈಸಿ: ನಿಯಮ ಸಡಿಲಿಕೆ

ಪಡಿತರ ಚೀಟಿಗೆ ಇ-ಕೆವೈಸಿ: ನಿಯಮ ಸಡಿಲಿಕೆ

Date:

ಉಡುಪಿ: ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಪೋರ್ಟಿಬಿಲಿಟಿ ಮೂಲಕ ಜೂನ್ 30 ರ ಒಳಗೆ ಇ-ಕೆವೈಸಿ ಮಾಡಿಸಲು ಅಂತಿಮ ಅವಕಾಶ ಕಲ್ಪಿಸಲಾಗಿದೆ.

ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಈವರೆಗೆ ಪಡಿತರ ಆಹಾರಧಾನ್ಯ ಪಡೆಯುತ್ತಿದ್ದ ಮೂಲ ನ್ಯಾಯಬೆಲೆ ಅಂಗಡಿಗಳಲ್ಲಿ ಮಾತ್ರ ಇ-ಕೆವೈಸಿ ಮಾಡಲು ಇದ್ದ ನಿಯಮವನ್ನು ಸಡಿಲಗೊಳಿಸಲಾಗಿದ್ದು, ಇದುವರೆಗೂ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ತಮ್ಮ ಬೆರಳಚ್ಚು ನೊಂದಾಯಿಸಿಕೊಳ್ಳಬಹುದಾಗಿದೆ (ಆಧಾರ ದೃಢೀಕರಣ ಇ-ಕೆವೈಸಿ).

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ ಹಾಗೂ ಅನಿಲ ಸಂಪರ್ಕ ಹೊಂದಿರುವ ಪಡಿತರ ಚೀಟಿದಾರರು, ಅನಿಲ ಸಂಪರ್ಕದ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು ಇ-ಕೆವೈಸಿ ಮಾಡುವ ನ್ಯಾಯಬೆಲೆ ಅಂಗಡಿಗಳಿಗೆ ನೀಡಬೇಕು.

ಸರಕಾರದ ಆದೇಶದಂತೆ ಜೂನ್ 30 ರ ಒಳಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿ ಮತ್ತು ಸದಸ್ಯರನ್ನು ರದ್ದು ಪಡಿಸಲು ಕ್ರಮವಹಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!