ಬೆಂಗಳೂರು: ಲಿಫ್ಟ್ ಕುಸಿದ ಪರಿಣಾಮ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತಪಟ್ಟ ಕಾರ್ಮಿಕ ಉತ್ತರ ಪ್ರದೇಶದವರೆಂದು ಗುರುತಿಸಲಾಗಿದೆ. ನಗರದ ತಿಗರಪಾಳ್ಯದ ಮೆಡಿಕಲ್ ಪ್ರೈವೇಟ್ ಲಿಮಿಟೆಡ್ ಬಿಲ್ಡಿಂಗ್ ನಲ್ಲಿ ದುರ್ಘಟನೆ ಸಂಭವಿಸಿದೆ.
ಮೆಡಿಕಲ್ ವೇರ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ. ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.