ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದೇನೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.
ಏನಿದು ಪ್ರಕರಣ?
ಉಡುಪಿಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್, ಹಿಂಡಲಗಾ ಪಂಚಾಯತ್ ವ್ಯಾಪ್ತಿಯ ಲಕ್ಷ್ಮೀದೇವಿ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದ ಅಭಿವೃದ್ಧಿ ಕಾಮಗಾರಿ ನಡೆಸಿದ್ದು ಹಣವನ್ನು ಬಿಡುಗಡೆ ಮಾಡಲು ಸಚಿವ ಈಶ್ವರಪ್ಪ ಅವರು ಶೇ. 40 ಕಮಿಷನ್ ಬೇಡಿಕೆ ಇಟ್ಟಿದ್ದರು ಎಂದು ಹೇಳಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಸಚಿವ ಕೆ. ಎಸ್. ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಸಹೋದರ ಪ್ರಶಾಂತ ಪಾಟೀಲ್ ಅವರು ಸಚಿವ ಈಶ್ವರಪ್ಪ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.