Wednesday, December 4, 2024
Wednesday, December 4, 2024

ಹೆಸರು ಕಾಳು ಖರೀದಿ ಅವಧಿ ವಿಸ್ತರಣೆ

ಹೆಸರು ಕಾಳು ಖರೀದಿ ಅವಧಿ ವಿಸ್ತರಣೆ

Date:

ಬೆಂಗಳೂರು, ನ.17: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರ ವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್‌ಗೆ 8,682 ರೂ. ನಿಗದಿಪಡಿಸಲಾಗಿದ್ದು, ಇದುವರೆಗೆ 20,450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...
error: Content is protected !!