ಬೆಂಗಳೂರು: ರಾಜ್ಯದಲ್ಲಿ 2021-22ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಇಲಾಖೆಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿ ದಿನಾಂಕ 23/08/2021 ರಿಂದ ರಾಜ್ಯದಲ್ಲಿ ಕೋವಿಡ್-19ರ ಸೋಂಕಿನ ಪ್ರಮಾಣ ಶೇ. 2 ಗಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9ನೇ ಮತ್ತು 10ನೇ ತರಗತಿಗಳನ್ನು ಪ್ರಾರಂಭದಲ್ಲಿ ಪ್ರತಿದಿನ ಅರ್ಧ ದಿನ (ಬೆಳಗಿನ ಅವಧಿಯಲ್ಲಿ) ರಾಜ್ಯ ಸರ್ಕಾರದ ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ.
ಈ ಕುರಿತು ಸುತ್ತೋಲೆಯನ್ನು ಸರಕಾರ ಹೊರಡಿಸಿದೆ. 1 ರಿಂದ 8 ನೇ ತರಗತಿಗಳನ್ನು ಪ್ರಾರಂಭಿಸುವ ಕುರಿತು ನಂತರ ನಿರ್ಧರಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
9ನೇ ಮತ್ತು 10ನೇ ತರಗತಿಗಳ ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ಈ ಕೆಳಗಿನ ಕ್ರಮವಹಿಸಲು ಸೂಚಿಸಲಾಗಿದೆ:
* ಮಕ್ಕಳು ಶಾಲೆಗೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯ.
* ಕೋವಿಡ್ ಸೋಂಕಿನ ಯಾವುದೇ ಲಕ್ಷಣಗಳಿರಬಾರದು.
* ವಿದ್ಯಾರ್ಥಿಗಳು ಮನೆಯಿಂದಲೇ ಅಗತ್ಯವಾದ ಕುಡಿಯುವ ನೀರು, ಉಪಹಾರವನ್ನು ತರುವಂತೆ ಸೂಚಿಸಲಾಗಿದೆ.
* ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಶುದ್ಧ ಬಿಸಿ ನೀರಿನ ವ್ಯವಸ್ಥೆ ಮಾಡುವುದು.
* ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭೌತಿಕ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ಅಥವಾ ಪರ್ಯಾಯ ವಿಧಾನಗಳಲ್ಲಿ ಹಾಜರಾಗಬಹುದು.