Wednesday, January 22, 2025
Wednesday, January 22, 2025

ಮೈಸೂರು ದಸರಾದಲ್ಲಿ ಆಹಾರ ಮಳಿಗೆ ತೆರೆಯಲು ಅರ್ಜಿ ಆಹ್ವಾನ

ಮೈಸೂರು ದಸರಾದಲ್ಲಿ ಆಹಾರ ಮಳಿಗೆ ತೆರೆಯಲು ಅರ್ಜಿ ಆಹ್ವಾನ

Date:

ಉಡುಪಿ: ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಸೆಪ್ಟಂಬರ್ 26 ರಿಂದ ಅಕ್ಟೋಬರ್ 5 ರ ವರೆಗೆ ನಡೆಯಲಿದ್ದು, ದಸರಾ ಅಂಗವಾಗಿ ಜನಪ್ರಿಯ ಆಹಾರ ಮೇಳವನ್ನು ಸೆ. 26 ರಿಂದ ಅ.3 ರ ವರೆಗೆ ಮೈಸೂರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೆಸ್ ಹೋಟೆಲ್ ಸಮೀಪದ ಮೂಡಾ ಮೈದಾನದಲ್ಲಿ ಆಯೋಜಿಸಲಾಗಿದ್ದು, ಈ ಆಹಾರ ಮೇಳಗಳಲ್ಲಿ ಸ್ಥಳೀಯ, ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಶೈಲಿಯ ಉಟೋಪಚಾರ ತಯಾರಿಸುವ ಆಹಾರ ಮಳಿಗೆ ತೆರೆಯಲು ಹೋಟೆಲ್, ಕೇಟರ‍್ಸ್, ಸಂಘ-ಸಂಸ್ಥೆ, ಗೃಹ ಅಡುಗೆ ತಯಾರಕರು ಹಾಗೂ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 12 ಕೊನೆಯ ದಿನ. ಅರ್ಜಿ ನಮೂನೆಗಳನ್ನು ರೂ.ನಂ.33, 2 ನೇ ಮಹಡಿ, ಹೊಸ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಸಿದ್ದಾರ್ಥನಗರ, ಮೈಸೂರು ಹಾಗೂ ಹೆಚ್ಚಿನ ಮಾಹಿತಿಗಾಗಿ ದಸರಾ ಮಹೋತ್ಸವ ಆಹಾರ ಮೇಳ ಉಪಸಮಿತಿಯ ಕಾರ್ಯಾಧ್ಯಕ್ಷೆ ಕುಮುದಾ ಶರತ್, ಕಾರ್ಯದರ್ಶಿ ರಮಣಿ ಎಂ.ಕೆ, ವ್ಯವಸ್ಥಾಪಕ ಸತೀಶ್ ಮೊ.ನಂ: 9481216356, ಕುಮಾರ್ ಮೊ.ನಂ: 9902248619, ಸುರೇಶ್ ಮೊ.ನಂ: 8722104052, ವಿದ್ಯಾ ಆರ್ ಮೊ.ನಂ; 9740428972, ಮಾದೇಗೌಡ ಮೊ.ನಂ: 890939533, ಶಶಿಧರ ನಾಯಕ್ ಮೊ.ನಂ: 9632960615, ಕಚೇರಿಯ ದೂ.ಸಂಖ್ಯೆ: 0821-2422107 ಹಾಗೂ ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮೈಸೂರು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!