Sunday, October 18, 2026
Sunday, October 18, 2026

ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ

ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ

Date:

ಬಾಗಲಕೋಟೆ, ಮಾ.18: ಬಾಗಲಕೋಟೆಯ ನವನಗರದಲ್ಲಿ ಆಯೋಜಿಸಿದ್ದ “ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಲ್ಲಿ ಭೂಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ನಾವು ಬದ್ಧರಾಗಿದ್ದು, ನಮ್ಮದು ನುಡಿದಂತೆ ನಡೆಯುವ ಜನಪರ ಸರ್ಕಾರವಾಗಿದೆ.

ಈ ಭಾಗದ ಶಾಸಕರಾಗಿದ್ದ ಹೆಚ್.ವೈ.ಮೇಟಿಯವರು ದಿವಂಗತರಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಬಾಗಲಕೋಟೆ ಸರ್ಕಾರಿ ಮೆಡಿಕಲ್ ಕಾಲೇಜಿನ ಶಂಕುಸ್ಥಾಪನೆಯಾಗಲು ಹೆಚ್.ವೈ.ಮೇಟಿಯವರೇ ಕಾರಣ. ಮೆಡಿಕಲ್ ಕಾಲೇಜ್ ಸ್ಥಾಪಿಸಲು 2025ರ ಬಜೆಟ್ ನಲ್ಲಿ ಘೋಷಣೆಯಾಗಿದ್ದು, ಇಂದು ಶಂಕುಸ್ಥಾಪನೆಗೊಳ್ಳುತ್ತಿದೆಯೇ ಹೊರತು, ಉಪಚುನಾವಣೆಯ ಕಾರಣಕ್ಕಾಗಿ ಅಲ್ಲ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನೇಕ ಜಿಲ್ಲೆಗಳನ್ನು ಅಭಿವೃದ್ಧಿಗೊಳಿಸುವ ದಿಸೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಲಾಗಿದೆ. ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಹಾಗೂ ಟ್ರಾಮಾ ಸೆಂಟರ್ ಗಳನ್ನು ಸ್ಥಾಪಿಸುವ ಉದ್ದೇಶವಿದ್ದು, ಈಗಾಗಲೇ ಸುಮಾರು 25 ಜಿಲ್ಲೆಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ವರ್ಷ ಇಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು.

ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಜೆಪಿಯವರು ಮಾಡುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾದವು. ನಾವು ಗ್ಯಾರಂಟಿ ಹಾಗೂ ಅಭಿವೃದ್ಧಿಗೆ ಸಮಾನ ಆದ್ಯತೆ ನೀಡುತ್ತಿದ್ದೇವೆ. ಪ್ರತಿ ವರ್ಷ ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಇದುವರೆಗೆ 1.22 ಲಕ್ಷ ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ, ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲಿಲ್ಲ. ಜಾತಿ ಧರ್ಮಗಳ ಮಧ್ಯೆ ವೈಮನಸ್ಯ ತರುವುದು ಅವರ ದುರಾಲೋಚನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್, ಹೆಚ್.ಕೆ.ಪಾಟೀಲ್, ಶಿವನಾಂದ ಪಾಟೀಲ್, ಡಾ. ಶರಣ ಪ್ರಕಾಶ ಪಾಟೀಲ್, ಆರ್.ಬಿ. ತಿಮ್ಮಾಪುರ್, ಶಾಸಕರಾದ ವಿಜಯಾನಂದ ಕಾಶಪ್ಪನವರ್, ಜೆ.ಟಿ.ಪಾಟೀಲ್, ಸಿದ್ದು ಸವದಿ, ಪರಿಷತ್ ಸದಸ್ಯರಾದ ಸುನೀಲ್ ಗೌಡ ಪಾಟೀಲ್, ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಂಜಯ್ಯನಮಠ ಸೇರಿದಂತೆ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!