Saturday, October 12, 2024
Saturday, October 12, 2024

ಆಟ ಆಧಾರಿತ ಗಣಿತ ಪಠ್ಯಕ್ರಮ

ಆಟ ಆಧಾರಿತ ಗಣಿತ ಪಠ್ಯಕ್ರಮ

Date:

ಬೆಂಗಳೂರು, ಅ. 11: ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರುವ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೂ ʼಆಟ ಆಧಾರಿತ ಗಣಿತ ಪಠ್ಯಕ್ರಮʼ ಪರಿಚಯಿಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಬುನಾದಿ ಹಂತದಿಂದಲೇ ಕಲಿಕೆ ಮತ್ತು ಬೋಧನೆಯ ಗುಣಮಟ್ಟ ಸುಧಾರಿಸಲು, ನಾವೀನ್ಯತೆಗೆ ಒತ್ತು ನೀಡಲು ಶಿಕ್ಷಣ ಇಲಾಖೆ ʼಜೆ-ಪಿಎಎಲ್‌ ದಕ್ಷಿಣ ಏಷ್ಯಾʼ ಜೊತೆ ಬುಧವಾರ ಒಪ್ಪಂದ ಮಾಡಿಕೊಂಡಿದೆ.

ಮೊದಲ ಹಂತದಲ್ಲಿ ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳ ಗಣಿತ ಕಲಿಕೆಗೆ ‘ಚಿಲಿ-ಪಿಲಿ’ ಪರಿಚಯ, 6, 7 ಮತ್ತು 8ನೇ ತರಗತಿಗಳಲ್ಲಿ ಹಿಂದುಳಿದ ಮಕ್ಕಳಿಗೆ ಪರಿಹಾರ ಬೋಧನೆಗೆ ‘ಮರು ಸಿಂಚನ’ ಹಾಗೂ 3ರಿಂದ 8ನೇ ತಗರತಿಯ ಮಕ್ಕಳಿಗೆ ‘ಗಣಿತ–ಗಣಕ’ ಕಲಿಕೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನೆರವು ದೊರೆಯಲಿದೆ. ಸರ್ಕಾರಿ ಶಾಲೆಯ ಶಿಕ್ಷಕರಿಗೆ ವಾರಕ್ಕೆ ಒಂದು ದಿನ ಕನಿಷ್ಠ 45 ನಿಮಿಷ ಮೊಬೈಲ್‌ ಫೋನ್‌ಗಳ ಮೂಲಕ ವಿಶೇಷ ತರಗತಿ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಪರಿಕಲ್ಪನೆಗಳನ್ನು ವಿವರಿಸಲು, ಗಣಿತದ ಸಮಸ್ಯೆಗಳನ್ನು ಪರಿಹರಿಸಲು ಸಂಸ್ಥೆಯ ಪ್ರತಿನಿಧಿಗಳು ನೆರವಾಗಲಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಟ್ರಸ್ಟ್‌ನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ

ಮುಂಬಯಿ, ಅ.11: ಟಾಟಾ ಗ್ರೂಪ್‌ನ ಅಂಗವಾದ ಟಾಟಾ ಟ್ರಸ್ಟ್‌ನ ಅಧ್ಯಕ್ಷರಾಗಿ ನೋಯೆಲ್...

ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಲ್ಲಿ ತಾಂತ್ರಿಕ ಸಮಸ್ಯೆ; ತುರ್ತು ಲ್ಯಾಂಡಿಂಗ್

ತಿರುಚಿರಾಪಳ್ಳಿ, ಅ.11: ತಿರುಚಿರಾಪಳ್ಳಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ...

ಗೂಡ್ಸ್ ರೈಲಿಗೆ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ಡಿಕ್ಕಿ

ಯು.ಬಿ.ಎನ್.ಡಿ., ಅ.11: ಶುಕ್ರವಾರ ರಾತ್ರಿ 8.50ರ ಸುಮಾರಿಗೆ ಚೆನ್ನೈ ವಿಭಾಗದ ಗುಮ್ಮಿಡಿಪೂಂಡಿ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಸಮಿತಿಗಳ ಉದ್ಘಾಟನೆ

ಮಂಗಳೂರು, ಅ.11: ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ...
error: Content is protected !!