Friday, July 24, 2026
Friday, July 24, 2026

ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಿಹಿ ಸುದ್ಧಿ

ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಿಹಿ ಸುದ್ಧಿ

Date:

ಬೆಂಗಳೂರು, ಜೂ.28: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸಾಮಾನ್ಯ ಕೋರ್ಸ್‌ಗಳ ಜೊತೆಗೆ ಒಂದು ಕೌಶಲ ವಿಷಯ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಒಂದು ವರ್ಷದವರೆಗೆ (ಎರಡು ಸೆಮಿಸ್ಟರ್‌) ಪ್ರತಿ ತಿಂಗಳು ರೂಪಾಯಿ 11 ಸಾವಿರದಿಂದ 17 ಸಾವಿರದವರೆಗೆ ಶಿಷ್ಯವೇತನ ಸಿಗಲಿದೆ. ರಾಜ್ಯದ ಉನ್ನತ ಶಿಕ್ಷಣದಲ್ಲಿ ಸಾಮಾನ್ಯ ಪದವಿ ಕೋರ್ಸ್‌ಗಳ ಜೊತೆಗೆ ಕೌಶಲಾಧಾರಿತ ವಿಷಯಗಳ ಅಧ್ಯಯನಕ್ಕೂ ಅವಕಾಶ ಮಾಡಿಕೊಡಲಾಗಿದ್ದು, ಇದೇ ಶೈಕ್ಷಣಿಕ ಸಾಲಿನಿಂದ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕೊನೆಯ ಐದು ಮತ್ತು ಆರನೇ ಸೆಮಿಸ್ಟರ್‌ನಲ್ಲಿ ಶಿಷ್ಯವೇತನದ ಸೌಲಭ್ಯ ದೊರಕಲಿದೆ.

ಹತ್ತು ಮಂದಿ ನಿವೃತ್ತ ಐಎಎಸ್‌ ಅಧಿಕಾರಿಗಳು ಸ್ಥಾಪಿಸಿರುವ ಕ್ರಿಸ್ಪ್‌ ಜೊತೆ ಉನ್ನತ ಶಿಕ್ಷಣದಲ್ಲಿ ಕೌಶಲಾಧಾರಿತ ಕೋರ್ಸ್‌ಗಳನ್ನು ಪರಿಚಯಿಸುವ ಒಪ್ಪಂದಕ್ಕೆ ರಾಜ್ಯ ಸರ್ಕಾರ ಸಹಿ ಹಾಕಿದೆ. ಮೊದಲ ವರ್ಷ 60 ಕಾಲೇಜುಗಳಲ್ಲಿ 3,600 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತಿದೆ. ಮೂರು ವರ್ಷಗಳಲ್ಲಿ 239 ಕಾಲೇಜುಗಳಿಗೆ ಯೋಜನೆ ವಿಸ್ತರಿಸಲಾಗುವುದು. 2026-27ರ ವೇಳೆಗೆ 14,340 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಗುರಿ ಹೊಂದಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!