ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸುವವರೆಗೂ ಮುಂದುವರಿಯುವಂತೆ ಯಡಿಯೂರಪ್ಪ ಅವರನ್ನು ಕೇಳಿಕೊಂಡಿದ್ದಾರೆ.
ರಾಜೀನಾಮೆಯ ಘೋಷಣೆಯ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ನಾನು ಆಭಾರಿಯಾಗಿದ್ದೇನೆ. ರಾಜ್ಯದ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ.
ರಾಜೀನಾಮೆ ನೀಡುವಂತೆ ಯಾರೂ ನನ್ನ ಮೇಲೆ ಒತ್ತಡ ಹೇರಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ನಾನು ಕೆಲಸ ಮಾಡುತ್ತೇನೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪತ್ರಕರ್ತರು ರಾಜ್ಯಪಾಲರಾಗಿ ಸೇವೆ ಸಲ್ಲಿಸಲು ಸಿದ್ಧರಿದ್ದೀರಾ ಎಂದು ಕೇಳಿದಾಗ, ನಾನು ಕರ್ನಾಟಕದ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.