Saturday, October 3, 2026
Saturday, October 3, 2026

ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ

ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ

Date:

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸುವವರೆಗೂ ಮುಂದುವರಿಯುವಂತೆ ಯಡಿಯೂರಪ್ಪ ಅವರನ್ನು ಕೇಳಿಕೊಂಡಿದ್ದಾರೆ.

ರಾಜೀನಾಮೆಯ ಘೋಷಣೆಯ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರ‍ೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ನಾನು ಆಭಾರಿಯಾಗಿದ್ದೇನೆ. ರಾಜ್ಯದ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ.

ರಾಜೀನಾಮೆ ನೀಡುವಂತೆ ಯಾರೂ ನನ್ನ ಮೇಲೆ ಒತ್ತಡ ಹೇರಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ನಾನು ಕೆಲಸ ಮಾಡುತ್ತೇನೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು.

ಪತ್ರಕರ್ತರು ರಾಜ್ಯಪಾಲರಾಗಿ ಸೇವೆ ಸಲ್ಲಿಸಲು ಸಿದ್ಧರಿದ್ದೀರಾ ಎಂದು ಕೇಳಿದಾಗ, ನಾನು ಕರ್ನಾಟಕದ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!