Tuesday, January 21, 2025
Tuesday, January 21, 2025

ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರ ಅಂಕಿತ

ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರ ಅಂಕಿತ

Date:

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ರಾಜ್ಯ ಸರಕಾರ ಸುಗ್ರೀವಾಜ್ಞೆಯ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಸರ್ಕಾರ ಜಾರಿಗೊಳಿಸಿದೆ.

ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ರಾಜ್ಯಪಾಲರು ಅಂಕಿತ ಹಾಕಿದ ಹಿನ್ನೆಲೆಯಲ್ಲಿ ಮತಾಂತರ ನಿಷೇಧ ಕಾಯ್ದೆ ರಾಜ್ಯದಲ್ಲಿ ಅನುಷ್ಠಾನಕ್ಕೆ ಬಂದಿದೆ.

ಬಲವಂತವಾಗಿ, ವಂಚನೆ, ಒತ್ತಾಯಪೂರ್ವಕವಾಗಿ ಆಮಿಷದ ಮೂಲಕ ನಡೆಸುವ ಮತಾಂತರವನ್ನು ನಿಷೇಧಿಸಲಾಗಿದೆ. ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿಯರು, ಸಹವರ್ತಿ ಅಥವಾ ಸಹೋದ್ಯೋಗಿಗಳು ಮತಾಂತರದ ಬಗ್ಗೆ ದೂರು ನೀಡಿದಲ್ಲಿ ಎಫ್‌ಐಆರ್ ದಾಖಲಿಸಲಾಗುವುದು. ಬಲವಂತದ ಮತಾಂತರಕ್ಕೆ ಮೂರರಿಂದ ಐದು ವರ್ಷ ಜೈಲು ಶಿಕ್ಷೆ, 25 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು.

ಮತಾಂತರ ಬಯಸುವ ವ್ಯಕ್ತಿ ಕನಿಷ್ಠ ಎರಡು ತಿಂಗಳ ಮೊದಲು ಜಿಲ್ಲಾಧಿಕಾರಿಗೆ ಈ ಬಗ್ಗೆ ತಿಳಿಸಬೇಕು. ಅಪ್ರಾಪ್ತ ವ್ಯಕ್ತಿ, ಮಹಿಳೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವ್ಯಕ್ತಿಯ ಬಲವಂತದ ಮತಾಂತರಕ್ಕೆ ಮೂರರಿಂದ ಹತ್ತು ವರ್ಷಗಳು ಜೈಲು ಶಿಕ್ಷೆ 50 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!