Monday, January 20, 2025
Monday, January 20, 2025

ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಸರ್ಕಾರ ಸಿದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಸರ್ಕಾರ ಸಿದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

ಬೆಳಗಾವಿ, ಡಿ.16: ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ತೀರುವಳಿಗಳನ್ನು ಪಡೆಯಲು ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಕೇಂದ್ರದ ಮೇಲೆ ಒತ್ತಡ ಹಾಕಿ ತೀರುವಳಿಗಳನ್ನು ಕೊಡಿಸಿದರೆ ತಕ್ಷಣವೇ ಕಾಮಗಾರಿಗಳ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು.

ನೀರಾವರಿ ಕೃಷ್ಣಾ ಭಾಗ್ಯ ಜಲ ನಿಗಮ 3ನೇ ಹಂತದಲ್ಲಿ 130 ಟಿಎಂಸಿ ನೀರು ಬಳಸಬೇಕು ಎಂಬ ಆದೇಶವಿದ್ದರೂ, ಅಫಿಡವಿಟ್ ಹಾಕಿಲ್ಲ. 2ನೇ ಟ್ರಿಬ್ಯುನಲ್ ಬ್ರಿಜೇಶ್ ಕುಮಾರ್ ವರದಿ ಕೊಟ್ಟು 13 ವರ್ಷಗಳಾಯಿತು. 13 ವರ್ಷಗಳಿಂದ ಗೆಜೆಟ್ ಅಧಿಸೂಚನೆ ಆಗಿಲ್ಲ. ಇದು ಆಗದೇ ಆಲಮಟ್ಟಿ ಜಲಾಶಯದ ಎತ್ತರವನ್ನು 524 ಮೀಟರ್ ಗೆ ಏರಿಸಲಾಗುವುದಿಲ್ಲ. ಈ ಬಗ್ಗೆ ಒತ್ತಾಯಿಸಲು ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ. ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಅರಣ್ಯ ಮತ್ತು ಪರಿಸರದ ತೀರುವಳಿಯಾಗಬೇಕು. ಅವರು ಕೊಟ್ಟ ತಕ್ಷಣ ನಾವು ಕೆಲಸ ಪ್ರಾರಂಭ ಮಾಡುತ್ತೇವೆ. ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ.

ಕೃಷ್ಣ ಮೇಲ್ದಂಡೆಗೆ 21 ಸಾವಿರ ಕೋಟಿ ರೂ.ಗಳ ಪರಿಷ್ಕೃತ ಅಂದಾಜು ಪಟ್ಟಿ. 5,300 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಘೋಷಣೆಯಾಗಿದೆ. ಇವತ್ತಿನವರೆಗೆ ಒಂದು ಪೈಸೆ ಬಿಡುಗಡೆಯಾಗಿಲ್ಲ. ಆದರೆ ಮತ್ತೊಂದೆಡೆ ಕೇಂದ್ರ ಹಣಕಾಸು ಮಂತ್ರಿಗಳು ಕರ್ನಾಟಕಕ್ಕೆ ಯಾವುದೇ ಅನುದಾನ ಬಾಕಿ ಇಲ್ಲ ಎನ್ನುತ್ತಾರೆ. ನಾವು ಅಧಿಸೂಚನೆ ಆಗುವವರೆಗೆ ಪುನರ್ವಸತಿ ಮತ್ತು ಪುನಶ್ಚೇತನ ಕಾರ್ಯವನ್ನು ಕೈಗೊಳ್ಳುತ್ತೇವೆ. ನಾವು ಅತಿ, ಅತ್ಯಂತ, ಹಿಂದುಳಿದ ತಾಲ್ಲೂಕುಗಳನ್ನು ಅಭಿವೃದ್ಧಿ ಮಾಡಲು ಬದ್ಧರಿದ್ದೇವೆ.

ಮೇಕೆದಾಟು 2018ರಲ್ಲಿ ಸುಪ್ರೀಂ ಕೋರ್ಟ್ ನಿರ್ಧಾರ ಸಾಮಾನ್ಯ ವರ್ಷಗಳಲ್ಲಿ 177. 25 ಟಿಎಂಸಿ ತಮಿಳುನಾಡಿಗೆ ಕೊಡಬೇಕು ಎಂದು ತೀರ್ಪು ನೀಡಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಎರಡೂ ರಾಜ್ಯಗಳೂ ನೀರು ಹಂಚಿಕೊಳ್ಳಬೇಕು ಎಂದು ತಿಳಿಸಿದೆ. ಮೇಕೆದಾಟು ಯೋಜನೆಯು ಕುಡಿಯುವ ನೀರು, ವಿದ್ಯುತ್ ಉತ್ಪಾದನೆ ಮಾಡುವ ಸಲುವಾಗಿ ರೂಪಿಸಿರುವ ಯೋಜನೆ. ಅಣೆಕಟ್ಟು, ಬ್ಯಾಲೆಲ್ಸಿಂಗ್ ರಿಸರ್ವಾಯರ್. ಕರ್ನಾಟಕದ ವ್ಯಾಪ್ತಿಯಲ್ಲಿಯೇ ನಿರ್ಮಿಸುವುದು. ಇದರಿಂದ ತಮಿಳುನಾಡಿಗೆ ಏನೂ ಹಾನಿಯಿಲ್ಲ. ಬದಲಿಗೆ ಅನುಕೂಲವಾಗುತ್ತದೆ. ತಮಿಳುನಾಡು, ಕೇರಳ, ಆಂಧ್ರದ ಜೊತೆ ಮಾತುಕತೆ ವಿಫಲವಾಗಿ ನ್ಯಾಯಮಂಡಳಿಯು 193 ಟಿಎಂಸಿ ನೀರು ಕೊಡಬೇಕು ಎಂದು ತೀರ್ಪು ನೀಡಿತ್ತು. ನಂತರ 177.25 ಟಿಎಂಸಿ ಯನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಉತ್ತರ ಕರ್ನಾಟಕದ ಚರ್ಚೆಯಲ್ಲಿ 42 ಜನ ಭಾಗವಹಿಸಿದ್ದು 11 ಗಂಟೆ 4 ನಿಮಿಷಗಳ ಕಾಲ ಮಾತನಾಡಿದ್ದಾರೆ. ರಾಜಕೀಯ ಬೆರೆಸದೆ ರಾಜ್ಯದ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಬಗ್ಗೆ ಚರ್ಚೆಯಾಗಿದೆ. ರಾಜ್ಯದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಚರ್ಚೆಯಾಗಿದೆ. ಕಾಂಗ್ರೆಸ್ ನ 24 ಜನ ಬಿಜೆಪಿಯ 15, ಜನತಾ ದಳದ 2, ಪಕ್ಷೇತರರು ಒಬ್ಬರು ವಿಶೇಷ ಚರ್ಚೆಯಲ್ಲಿ ಭಾಗವಹಿಸಿ ಅಭಿವೃದ್ಧಿಗೆ ಸಲಹೆಗಳನ್ನು ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!