ಬೆಂಗಳೂರು, ಡಿ. 27: ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಡಿಸೆಂಬರ್ 27 ರಿಂದ 29 ರವರೆಗೆ ಗೃಹಲಕ್ಷ್ಮಿ ಯೋಜನೆಯ ವಿಶೇಷ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಪ್ರಮುಖವಾಗಿ ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇ-ಕೆವೈಸಿ ಅಪ್ಡೆಟ್, ಹೊಸ ಬ್ಯಾಂಕ್ ಖಾತೆ ಸಂಪರ್ಕ ಮುಂತಾದ ಅಡೆತಡೆಗಳನ್ನು ನಿವಾರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಡಿ. 29 ರವರೆಗೆ ಗ್ರಾಮ ಪಂಚಾಯತಿಗಳಲ್ಲಿ ಗೃಹಲಕ್ಷ್ಮಿ ವಿಶೇಷ ಶಿಬಿರ
ಡಿ. 29 ರವರೆಗೆ ಗ್ರಾಮ ಪಂಚಾಯತಿಗಳಲ್ಲಿ ಗೃಹಲಕ್ಷ್ಮಿ ವಿಶೇಷ ಶಿಬಿರ
Date: