Sunday, January 19, 2025
Sunday, January 19, 2025

ಹಿಜಾಬ್- ಹೈಕೋರ್ಟ್ ತೀರ್ಪು ಪ್ರಕಟ

ಹಿಜಾಬ್- ಹೈಕೋರ್ಟ್ ತೀರ್ಪು ಪ್ರಕಟ

Date:

ಬೆಂಗಳೂರು: ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧ ಪ್ರಕರಣ ಸಂಬಂಧ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ.

ಸಮವಸ್ತ್ರ ಕಡ್ಡಾಯಗೊಳಿಸಿ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ವಿದ್ಯಾರ್ಥಿಗಳು ಸಮವಸ್ತ್ರ ಸಂಹಿತೆ ಆದೇಶ ಪಾಲಿಸಬೇಕು. ಹಿಜಾಬ್ ಇಸ್ಲಾಮಿನ ಅತ್ಯಗತ್ಯ ಆಚರಣೆ ಅಲ್ಲ ಎಂದು ಕೋರ್ಟ್ ಹೇಳಿದೆ.

ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧಿಸಿರುವ ಕ್ರಮ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರಸಂಹಿತೆ ಜಾರಿ ಸಂಬಂಧ ಕಳೆದ ಫೆ.5ರಂದು ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ 10ಕ್ಕೂ ಅಧಿಕ ಅರ್ಜಿಗಳು ಹಾಗೂ ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿದ್ದವು.

ಸತತ 11 ದಿನ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ ಹಾಗೂ ನ್ಯಾಯಮೂರ್ತಿಗಳಾದ ಕೃಷ್ಣ ಎಸ್​. ದೀಕ್ಷಿತ್​ ಮತ್ತು ಖಾಜಿ ಜೈಬುನ್ನಿಸಾ ಮೊಹಿದ್ದೀನ್​ ಅವರಿದ್ದ ಪೂರ್ಣಪೀಠ ಫೆ.25ರಂದು ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

ಇಂದು ತೀರ್ಪು ಪ್ರಕಟವಾಗಿದ್ದು, ತನ್ಮೂಲಕ ಹಿಜಾಬ್​ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡಿದಂತಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಉಡುಪಿ, ಜ.19: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ...
error: Content is protected !!