Wednesday, October 21, 2026
Wednesday, October 21, 2026

ಐತಿಹಾಸಿಕ ಜಂಬೂ ಸವಾರಿ ಸಂಪನ್ನ

ಐತಿಹಾಸಿಕ ಜಂಬೂ ಸವಾರಿ ಸಂಪನ್ನ

Date:

ಮೈಸೂರು, ಅ.21: ಮೈಸೂರು ದಸರಾ ಮಹೋತ್ಸವದ ವೈಭವದ ಪ್ರತೀಕವಾದ ಜಂಬೂಸವಾರಿಗೆ ಅರಮನೆ ಆವರಣದಲ್ಲಿ ಶುಭ ಮೀನ ಲಗ್ನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮೈಸೂರು ರಾಜವಂಶದ ಪ್ರತಿನಿಧಿ ಹಾಗೂ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇತರ ಗಣ್ಯರ ಸಮ್ಮುಖದಲ್ಲಿ ಚಾಲನೆ ನೀಡಿ, ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ಭಕ್ತಿಪೂರ್ವಕವಾಗಿ ಪುಷ್ಪಾರ್ಚನೆ ಸಲ್ಲಿಸಿದರು. ಗಜರಾಜ ಪ್ರಶಾಂತನ ಬೆನ್ನ ಮೇಲೆ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ತಾಯಿ ಶ್ರೀ ಚಾಮುಂಡೇಶ್ವರಿಯ ವೈಭವದ ಮೆರವಣಿಗೆ ಮೈಸೂರಿನ ಪ್ರಮುಖ ಮಾರ್ಗಗಳಲ್ಲಿ ಸಾಗಿತು. ರಸ್ತೆಯ ಇಕ್ಕೆಲಗಳಲ್ಲಿ ಲಕ್ಷಾಂತರ ಜನರು ಜಂಬೂ ಸವಾರಿಯನ್ನು ಕಣ್ತುಂಬಿಕೊಂಡರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ವಿಶೇಷ ಅತಿಥಿಗಳಾದ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್‌ ರೆಡ್ಡಿ, ಕೇರಳಂ ಮುಖ್ಯಮಂತ್ರಿ ವಿ.ಡಿ ಸತೀಶನ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮೈಸೂರು ಜಿಲ್ಲಾಧಿಕಾರಿಗಳಾದ ಲಕ್ಷ್ಮೀಕಾಂತ ರೆಡ್ಡಿ.ಜಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಪುಷ್ಪಾರ್ಚನೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಿ ಬಂಗಾರವಾಗಲಿ, ನಾಡು ಸಮೃದ್ಧಿಯಾಗಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೈಸೂರು, ಅ.21: ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಸಂಭ್ರಮದ ಅಂಗವಾಗಿ,...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಚಂಡಿಕಾಯಾಗ, ಘಂಟಾನಾದ ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಕಾಪು, ಅ.21: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ...

ಕುಸ್ತಿ: ವಿವೇಕ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿ ಸೃಷ್ಠಿ ಆರ್ ರಾಷ್ಟ್ರಮಟ್ಟಕ್ಕೆ

ಕೋಟ, ಅ.21: ಗದಗದಲ್ಲಿ ನಡೆದ ರಾಜ್ಯಮಟ್ಟದ ಕುಸ್ತಿ ಪಂದ್ಯಾಟದಲ್ಲಿ ವಿವೇಕ ಬಾಲಕಿಯರ...
error: Content is protected !!