ಬೆಂಗಳೂರು, ಜ.6: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಕರ್ನಾಟಕದಲ್ಲಿ ಎರಡು ಹ್ಯೂಮನ್ ಮೆಟಾಪ್ನ್ಯುಮೋವೈರಸ್ (ಎಚ್ಎಂಪಿವಿ) ಪ್ರಕರಣಗಳನ್ನು ಪತ್ತೆ ಮಾಡಿದೆ. ದೇಶಾದ್ಯಂತ ಉಸಿರಾಟದ ಕಾಯಿಲೆಗಳನ್ನು ಮೇಲ್ವಿಚಾರಣೆ ಮಾಡುವ ಐಸಿಎಂಆರ್ನ ನಿರಂತರ ಪ್ರಯತ್ನಗಳ ಭಾಗವಾಗಿ, ಬಹು ಉಸಿರಾಟದ ವೈರಲ್ ರೋಗಕಾರಕಗಳಿಗೆ ವಾಡಿಕೆಯ ಕಣ್ಗಾವಲು ಮೂಲಕ ಎರಡೂ ಪ್ರಕರಣಗಳನ್ನು ಗುರುತಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಬೆಂಗಳೂರಿನಲ್ಲಿ ಎಂಟು ತಿಂಗಳ ಮತ್ತು ಮೂರು ತಿಂಗಳ ಮಗುವಿನಲ್ಲಿ ಸೋಂಕು ಪತ್ತೆಯಾಗಿದ್ದು, ಮಗುವಿನ ಪೋಷಕರ ಟ್ರಾವೆಲ್ ಹಿಸ್ಟರಿ ಕಲೆ ಹಾಕಲಾಗುತ್ತಿದೆ.