Home ಸುದ್ಧಿಗಳು ರಾಜ್ಯ ಹಿಜಾಬ್ ಕೇಸರಿ ಸಂಘರ್ಷ- ಪ್ರೌಢಶಾಲೆ, ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಿದ ಸರ್ಕಾರ

ಹಿಜಾಬ್ ಕೇಸರಿ ಸಂಘರ್ಷ- ಪ್ರೌಢಶಾಲೆ, ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಿದ ಸರ್ಕಾರ

641
0

ಬೆಂಗಳೂರು: ಹಿಜಾಬ್ ಕೇಸರಿ ಸಂಘರ್ಷದ ಕಾವು ತೀವ್ರವಾಗಿ ಏರುತ್ತಿರುವ ಸಂದರ್ಭದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಬುಧವಾರದಿಂದ ಮೂರು ದಿನ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದೆ. ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ಹಿಂಸಾಚಾರ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ 3 ದಿನ ಪ್ರೌಢಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಸ್ತ್ರ ಸಂಹಿತೆ ಬಗ್ಗೆ ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ.

ಪ್ರಕರಣ ನ್ಯಾಯಾಲಯದ ಮುಂದಿದ್ದು ತೀರ್ಪಿನನ್ವಯ ಸರ್ಕಾರವು ಸೂಕ್ತ ಕ್ರಮ ವಹಿಸಲಿದೆ. ವಿದ್ಯಾರ್ಥಿಗಳು, ಜನತೆ ಶಾಂತಿ-ಸೌಹಾರ್ದತೆ ಕಾಪಾಡಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.