Home ಸುದ್ಧಿಗಳು ರಾಜ್ಯ ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಗೃಹ ಸಚಿವ ಅಮಿತ್ ಶಾ ರಣಕಹಳೆ

ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಗೃಹ ಸಚಿವ ಅಮಿತ್ ಶಾ ರಣಕಹಳೆ

132
0

ಬೆಂಗಳೂರು, ಏ.2: ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಂಗಳವಾರ ಬಿಜೆಪಿ ಕರ್ನಾಟಕದ ವಿಜಯ ಸಂಕಲ್ಪ ಸಮಾವೇಶ – ಶಕ್ತಿ ಕೇಂದ್ರ ಪ್ರಮುಖರ ಸಮ್ಮೇಳನ ನಡೆಯಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮೇಳನವನ್ನುದ್ದೇಶಿಸಿ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ 10 ವರ್ಷಗಳಲ್ಲಿ ದೇಶ ಅಭಿವೃದ್ಧಿಯ ಪಥದಲ್ಲಿ ಮುನ್ನುಗ್ಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ 28 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು ದೇಶಾದ್ಯಂತ 400 ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದರು.

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾದ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ವಿರೋಧ ಪಕ್ಷ ನಾಯಕರಾದ ಆರ್. ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಚುನಾವಣಾ ಉಸ್ತುವಾರಿಗಳಾದ ರಾಧಾಮೋಹನ್ ದಾಸ್ ಅಗರ್ವಾಲ್, ಚುನಾವಣಾ ಸಹ ಉಸ್ತುವಾರಿಗಳಾದ ಸುಧಾಕರ್ ರೆಡ್ಡಿ,ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಅಶ್ವತ್ಥನಾರಾಯಣ, ಸಿಟಿ ರವಿ, ಬಿಜೆಪಿ ಅಭ್ಯರ್ಥಿಗಳಾದ ಡಾ. ಸಿ.ಎನ್. ಮಂಜುನಾಥ್, ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಡಾ. ಸುಧಾಕರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.