ಬೆಂಗಳೂರು, ಫೆ.20: ಹಠಾತ್ ಹೃದಯಾಘಾತದ ಸಂದರ್ಭದಲ್ಲಿ ಜೀವರಕ್ಷಕವಾಗಿರುವ ಡಾ.ಪುನೀತ್ ರಾಜ್‌ಕುಮಾರ್ ಹೃದಯಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲಾ ತಾಲೂಕುಗಳಿಗೆ ವಿಸ್ತರಿಸಲಾಗುವುದು. ಈ ಯೋಜನೆ ಅಡಿಯಲ್ಲಿ ರೂ.25,000 ಮೌಲ್ಯದ ಜೀವರಕ್ಷಕ ಚುಚ್ಚುಮದ್ದು ಉಚಿತವಾಗಿ ನೀಡಲಾಗುತ್ತಿದೆ. ಈಗಾಗಲೇ ಮೊದಲ ಮತ್ತು ಎರಡನೇ ಹಂತದಲ್ಲಿ 15 ಜಿಲ್ಲೆಗಳ 70 ತಾಲೂಕು ಆಸ್ಪತ್ರೆಗಳಲ್ಲಿ ಯೋಜನೆ ಜಾರಿಗೊಳಿಸಲಾಗಿದ್ದು, ಉಳಿದ 16 ಜಿಲ್ಲೆಗಳ ಎಲ್ಲಾ ತಾಲೂಕುಗಳಿಗೂ ವಿಸ್ತರಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಹೃದಯಜ್ಯೋತಿ ಯೋಜನೆ ಎಲ್ಲಾ ತಾಲೂಕುಗಳಿಗೆ ವಿಸ್ತರಣೆ: ದಿನೇಶ್ ಗುಂಡೂರಾವ್

ಹೃದಯಜ್ಯೋತಿ ಯೋಜನೆ ಎಲ್ಲಾ ತಾಲೂಕುಗಳಿಗೆ ವಿಸ್ತರಣೆ: ದಿನೇಶ್ ಗುಂಡೂರಾವ್
Date: