Sunday, January 19, 2025
Sunday, January 19, 2025

ಮುಡಾ ವಿಷಯದಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಡಾ ವಿಷಯದಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಮೈಸೂರು, ಆ.7: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬುಧವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿದೆ. ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ.
ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ 2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ ಅರ್ಜಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ.

ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್‌ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!