ಬೆಂಗಳೂರು, ಜು.2: ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಈ ಬಗ್ಗೆ ಅನುಮಾನ ಬರುವಂತದ್ದು ಏನಿದೆ? ಬಿಜೆಪಿ ನಮ್ಮ ಹೈಕಮಾಂಡ್ ಅಲ್ಲ, ಅವರು ಹೇಳಿದಂಗೆಲ್ಲ ನಮ್ಮಲ್ಲಿ ನಡೆಯಲ್ಲ.
ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲುಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ, ಸತ್ಯವನ್ನಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ, ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.




By
ForthFocus™