ಬೆಂಗಳೂರು, ಫೆ.28: ಪಾಕಿಸ್ತಾನ್ ಜಿಂದಾಬಾದ್ ಎಂಬ ರಾಷ್ಟ್ರ ವಿದ್ರೋಹದ ಉಗ್ರ ಘೋಷಣೆ ಭಾರತದ ಪ್ರಜಾಪ್ರಭುತ್ವದ ದೇಗುಲ ವಿಧಾನ ಸೌಧದಲ್ಲೇ ಮೊಳಗಿದೆ ಎಂದರೆ ಕಾಂಗ್ರೆಸ್ ಇನ್ನೆಷ್ಟು ದೇಶ ಸುಡುವ ವಿಷಜಂತುಗಳನ್ನು ತನ್ನ ಮಡಿಲಲ್ಲಿ ಕಟ್ಟಿ ಕೊಂಡಿರಬಹುದು ಎಂದು ಅಂದಾಜಿಸಲು ಇಂದಿನ ಘಟನೆ ಸಾಕ್ಷಿ ಒದಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ತನ್ನನು ರಕ್ಷಿಸಲು ತಮ್ಮ ಮನಃಸ್ಥಿತಿಯ ಕಾಂಗ್ರೆಸ್ ಸರ್ಕಾರ ಇರುವಾಗ ನಾವ್ಯಾರಿಗೆ ಹೆದರಬೇಕು ಎಂಬ ಮನಸ್ಸಿನಿಂದ ಘೋಷಣೆ ಕೂಗಿರುವ ದೇಶ ವಿರೋಧಿಗಳನ್ನು ಈ ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು. ಸಾಕ್ಷಿಗಳೆಲ್ಲವೂ ಕಣ್ಣೆದುರಿಗೇ ಇರುವಾಗ ದೇಶ ವಿರೋಧಿಗಳನ್ನು ರಕ್ಷಿಸಲು ಯತ್ನಿಸುವ ಪ್ರಯತ್ನ ನಡೆದರೆ ಮುಂದಾಗುವ ಪರಿಣಾಮಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆಯಾಗಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ದೇಶವಿರೋಧಿ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಿ: ವಿಜಯೇಂದ್ರ
ದೇಶವಿರೋಧಿ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಿ: ವಿಜಯೇಂದ್ರ
Date: