Wednesday, January 22, 2025
Wednesday, January 22, 2025

ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವುಗಳು ಸ್ವಾಭಾವಿಕ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವುಗಳು ಸ್ವಾಭಾವಿಕ: ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

ಬೆಂಗಳೂರು, ಡಿ.3: ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್ಘಡಗಳಲ್ಲಿ ಹಿನ್ನಡೆಯಾಗಿದೆ.

ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರವಿದೆ. ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ. ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು.

ಬಿಜೆಪಿ ಬಿಆರ್‌ಎಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡದ್ದು ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು‌ ಕೂಡಾ ನಮ್ಮ ಗೆಲುವಿಗೆ ಕಾರಣ. ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಕೂಡಾ ಇದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!