Monday, February 24, 2025
Monday, February 24, 2025

ಕನ್ನಡ ಪತ್ರಿಕೆ, ಪುಸ್ತಕ ಓದುವ ಪರಿಪಾಠ ರೂಢಿಸಿಕೊಳ್ಳಿ: ಸಚಿವ ಸುನೀಲ್ ಕುಮಾರ್

ಕನ್ನಡ ಪತ್ರಿಕೆ, ಪುಸ್ತಕ ಓದುವ ಪರಿಪಾಠ ರೂಢಿಸಿಕೊಳ್ಳಿ: ಸಚಿವ ಸುನೀಲ್ ಕುಮಾರ್

Date:

ಬೆಂಗಳೂರು: ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ ಹಾಗೆಯೇ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಮಾಡಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳೆಸುವಲ್ಲಿ ಜನರು ಸಹ ಪಾಲುಗೊಳ್ಳಲು ಸಾಧ್ಯವಾಗುತ್ತದೆ ಎಂದು ಮತ್ತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು.

ಅವರು ಬುಧವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಭಾರತಾಂಬೆ ಹಾಗೂ ಕನ್ನಡಾಂಬೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಇಲಾಖೆ ಸಚಿವರಾಗಿ ಕಾರ್ಯಾರಂಭ ಮಾಡಿದರು. ಪವರ್ ಇಲಾಖೆಯಲ್ಲಿ ಸಂಸ್ಕೃತಿ ತರುವ, ಸಂಸ್ಕೃತಿ ಇಲಾಖೆಗೆ ಪವರ್ ತುಂಬುವ ಕೆಲಸ ಮಾಡಬೇಕಿದೆ, ಅದನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಅವರು ಹೇಳಿದರು. ಎರಡು ಇಲಾಖೆಗಳ ಆಡಳಿತ ಸುಧಾರಣೆಗೆ ಮತ್ತು ಕಾರ್ಯಕ್ರಮಗಳ ಸಮರ್ಥ ಅನುಷ್ಠಾನಕ್ಕೆ ಬೇಕಾಗುವ ಎಲ್ಲಾ ಕ್ರಮಗಳನ್ನು ನಿರ್ದಾಕ್ಷಿಣ್ಯವಾಗಿ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದರು. ಇದೇ ಸಂದರ್ಭದಲ್ಲಿ 2019 ಮತ್ತು 20ನೇ ಸಾಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾನಪದಶ್ರೀ ಪ್ರಶಸ್ತಿ ಪುರಸ್ಕೃತೆ ಭೀಮವ್ವ ದೊಡ್ಡ ಬಾಳವ್ವ ಶಿಳ್ಳೆಕ್ಯಾತರ, ಮತ್ತು ಬಿ ವಿ ಕಾರಂತ ಪ್ರಶಸ್ತಿಗೆ ಆಯ್ಕೆಯಾದ ಹೆಚ್.ವಿ.ವೆಂಕಟಸುಬ್ಬಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. 

ಕಲಾಕ್ಷೇತ್ರದ ಆವರಣದಲ್ಲಿ ಇರುವ ಕನ್ನಡ ಪುಸ್ತಕ ಪ್ರಾಧಿಕಾರದ ಸಿರಿಗನ್ನಡ ಮಾರಾಟ ಮಳಿಗೆಗೆ ಭೇಟಿ ಕೊಟ್ಟು ಕನಕಾವಲೋಕನ, ಪುಸ್ತಕ ಹಾಗೂ ಡಿ ವಿ ಜಿ ಅವರ ನೆನಪಿನ ಚಿತ್ರಗಳು ಮತ್ತು ಶಿವರಾಮ ಕಾರಂತರ ನಾಟಕಗಳು ಎಂಬ ಮೂರು ಪುಸ್ತಕಗಳನ್ನು ಖರೀದಿ ಮಾಡಿದರು. ಬಳಿಕ ಅದರ ಮುಂಭಾಗದಲ್ಲಿಯೇ ಇದ್ದ ಕ್ಯಾಂಟೀನಲ್ಲಿ ಸಾಹಿತಿ ಮತ್ತು ಕಲಾವಿದರ ಜೊತೆ ಕಾಫಿ ಸೇವನೆ ಮಾಡಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಎಸ್. ನಾಗಾಭರಣ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ. ಎನ್. ನಂದೀಶ್ ಹಂಚೆ, ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ವಸಂತಕುಮಾರ್ ಬಿ.ವಿ., ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಆನೂರು ಅನಂತ ಕೃಷ್ಣಶರ್ಮ, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಮಹಿಂದ್ರ, ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ, ಕಲಾವಿದೆ ಮಾಳವಿಕಾ ಅವಿನಾಶ್, ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ಕನಕ ಅಧ್ಯಯನ ಪೀಠದ ಸಮನ್ವಯಾಧಿಕಾರಿ ಎಂ ಆರ್. ಸತ್ಯನಾರಾಯಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜೆ. ರವಿಶಂಕರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.24: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...
error: Content is protected !!