ದಾವಣಗೆರೆ, ಮೇ 29: ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ನೈಋತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು ದಾವಣಗೆರೆ ಜಿಲ್ಲೆಯ ಹೊನ್ನಾಳಿಗೆ ಭೇಟಿ ನೀಡಿದರು.
ಹೊನ್ನಾಳಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ವಾಲ್ಮೀಕಿ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ತಿಳಿಸಿದರು. ಬಳಿಕ ಹೊನ್ನಾಳಿ ನ್ಯಾಯಾಲಯ ಮತ್ತು ವಿವಿಧ ಭಾಗಗಳಲ್ಲಿ ಮತಯಾಚನೆ ನಡೆಸಿ ಬೆಂಬಲಿಸುವಂತೆ ಮನವಿ ಮಾಡಿದರು.