ಬೆಂಗಳೂರು, ಆ.20: ದೇಶದ ಮೊದಲ ಕೆಎಚ್‌ಐಆರ್ ಸಿಟಿ ಶೀಘ್ರದಲ್ಲಿ ಆರಂಭವಾಗಲಿದೆ. ದೊಡ್ಡಬಳ್ಳಾಪುರ – ದಾಬಸ್‌ಪೇಟೆ ಮಧ್ಯೆ 2 ಸಾವಿರ ಎಕರೆ ಪ್ರದೇಶದಲ್ಲಿ ಸ್ಥಾಪನೆಯಾಗಲಿದೆ. ಜೀವ ವಿಜ್ಞಾನ, ಅಡ್ವಾನ್ಸ್‌ಡ್ ಮ್ಯಾನುಫ್ಯಾಕ್ಚರಿಂಗ್, ಸೆಮಿ ಕಂಡಕ್ಟರ್ ಸೇರಿ ಆಯ್ದ ವಲಯಗಳಲ್ಲಿ ಜಾಗತಿಕ ಮಟ್ಟದ ಪ್ರತಿಷ್ಠಿತ ವಿವಿಗಳು, ಕಂಪನಿಗಳ ಕ್ಯಾಂಪಸ್‌ಗಳಿಗೆ ಉದ್ದೇಶಿತ ಕೆಎಚ್‌ಐಆರ್ ಸಿಟಿಯಲ್ಲಿ ಅವಕಾಶ ನೀಡಲಾಗುತ್ತಿದೆ. ರಾಜ್ಯದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಉದ್ದಿಮೆಗಳು ಮತ್ತು ಸಂಶೋಧನಾ ಸಂಸ್ಥೆಗಳು ಎತ್ತರಕ್ಕೆ ಬೆಳೆಯಲು ಇದರಿಂದ ಸಾಧ್ಯವಾಗಲಿದೆ. ಮುಖ್ಯವಾಗಿ ರಾಜ್ಯವು ಜಾಗತಿಕ ಮಟ್ಟದಲ್ಲಿ ಪ್ರಮುಖ ಹೂಡಿಕೆ ತಾಣವಾಗಿ ಹೊರಹೊಮ್ಮಬೇಕು ಎಂಬುದು ಈ ಯೋಜನೆಯ ಆಶಯ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ದೇಶದ ಮೊದಲ ಕೆಎಚ್‌ಐಆರ್ ಸಿಟಿ
ಬೆಂಗಳೂರಿನಲ್ಲಿ ದೇಶದ ಮೊದಲ ಕೆಎಚ್‌ಐಆರ್ ಸಿಟಿ
Date: