Monday, January 20, 2025
Monday, January 20, 2025

ರಾಜ್ಯಕ್ಕೆ ಜಿ.ಎಸ್.ಟಿಯಿಂದ ಅನ್ಯಾಯ: ಮುಖ್ಯಮಂತ್ರಿ ಸಿದ್ಧರಾಮಯ್ಯ

ರಾಜ್ಯಕ್ಕೆ ಜಿ.ಎಸ್.ಟಿಯಿಂದ ಅನ್ಯಾಯ: ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

ಬೆಂಗಳೂರು, ಫೆ. 6: ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಫೆಬ್ರವರಿ 7ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯ ಬಿಜೆಪಿಯ ಶಾಸಕರು, ಸಂಸದರು, ನಾಯಕರಿಗೂ ಈ ಮೂಲಕ ನಾವು ಪ್ರತಿಭಟನೆಗೆ ಕರೆ ಕೊಡುತ್ತಿದ್ದೇವೆ. ನಾವು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ. ರಾಜ್ಯದ ಪರವಾಗಿ ಪ್ರತಿಭಟಿಸುತ್ತಿದ್ದೇವೆ. ನೀವೂ ರಾಜ್ಯದ ಜನರ ಧ್ವನಿಯಾಗಿ, ರಾಜ್ಯದ ಜನರ ಪರವಾಗಿ ನಿಲ್ಲಿ ಎಂದು ಬಿಜೆಪಿಯವರಿಗೆ ಕರೆ ಕೊಡುತ್ತೇವೆ. ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು ನಮ್ಮ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ತಾಳ್ಮೆಯಿಂದ ಕಾಯುತ್ತಿದ್ದೆವು. ಕಳೆದ ಸಾಲಿನ ಬಜೆಟ್ ನಲ್ಲಿ ಹೇಳಿದಂತೆ ನಡೆದುಕೊಳ್ಳುತ್ತಾರೆ ಎಂದು ಕಾದಿದ್ದೆವು. ಆದರೆ ಇದುವರೆಗೂ ಅನ್ಯಾಯ ಸರಿ ಪಡಿಸಿಲ್ಲ. ಇದರ ವಿರುದ್ಧ ಧ್ವನಿ ಎತ್ತಲೇಬೇಕಾಗಿದೆ.

ಭದ್ರಾ ಯೋಜನೆಗೆ ರೂ. 5,300 ಕೋಟಿ ಕೊಡುತ್ತೇವೆ ಎಂದು ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿ ಈವರಗೆ ಒಂದು ರೂ. ಕೂಡ ಬಿಡುಗಡೆ ಮಾಡಿಲ್ಲ. ಬರ ಪರಿಹಾರದ ಹಣವೂ ಇಲ್ಲ. ನರೇಗಾ ಅಡಿ 150 ಮಾನವ ದಿನಗಳಿಗೆ ಕೂಲಿ ಕೊಡಲು ಕೂಡ ಅನುಮತಿ ನೀಡಿಲ್ಲ. ಇಂಥ ಹಲವು ಕಾರಣಗಳಿಗಾಗಿ ಅನಿವಾರ್ಯವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ದೇಶದ ಜನರ ಗಮನ ಸೆಳೆಯಬೇಕು, ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಬಗ್ಗೆ, ಹಣಕಾಸು ಹಂಚಿಕೆಯಲ್ಲಾಗಿರುವ ತಾರತಮ್ಯ, ಬರ ಪರಿಹಾರದಲ್ಲಿ ತೋರಿರುವ ಮಲತಾಯಿ ಧೋರಣೆ ಬಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು. ರಾಜ್ಯದ ತೆರಿಗೆ ಬೆಳವಣಿಗೆ ದರ ಶೇ.15 ಇತ್ತು. ಇದರಿಂದ ತೆರಿಗೆ, ಕೇಂದ್ರದ ಅನುದಾನವೂ ಹೆಚ್ಚಾಗತ್ತೆ ಎಂದು ಕೇಂದ್ರ ಬಿಜೆಪಿ ಸರ್ಕಾರ ಹೇಳಿತ್ತು. ಆದರೆ ಅದನ್ನೂ ಪರಿಹಾರ ರೂಪದಲ್ಲಿ ರಾಜ್ಯಕ್ಕೆ ತುಂಬಿ ಕೊಡುವುದಾಗಿ ಕೇಂದ್ರ ಹೇಳಿತ್ತು.‌ ಈ ಪರಿಹಾರ ಜೂನ್ 2022 ಕ್ಕೆ ನಿಲ್ಲಿಸಿದ್ದಾರೆ. ಈಗ ಪರಿಹಾರ ಕೊಡುತ್ತಿಲ್ಲ. 5 ವರ್ಷಗಳ ಕಾಲ ಮಾತ್ರ ಪರಿಹಾರ ಕೊಟ್ಟರು. ಇದರಿಂದಾಗಿ ಈಗ ನಮ್ಮ ತೆರಿಗೆ ಬೆಳವಣಿಗೆ 15% ಗೆ ಮತ್ತೆ ತಲುಪಲು ಆಗಲೇ ಇಲ್ಲ. ಹೀಗಾಗಿ ಪರಿಹಾರ ಮುಂದುವರೆಸಿ ಎಂದು ಕೇಳಿದೆವು. ಇವತ್ತಿನವರೆಗೂ ಮುಂದುವರೆಸುವ ಬಗ್ಗೆ ತೀರ್ಮಾನವನ್ನೇ ಮಾಡಿಲ್ಲ. ಈಗಲೂ ನಮಗೆ, ನಮ್ಮ ರಾಜ್ಯಕ್ಕೆ ಜಿ.ಎಸ್.ಟಿಯಲ್ಲಿಅನ್ಯಾಯ ಆಗುತ್ತಲೇ ಇದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!