Home ಸುದ್ಧಿಗಳು ರಾಜ್ಯ ಹಾರ-ತುರಾಯಿ, ಶಾಲು-ಶಲ್ಯದ ಬದಲಿಗೆ ಪುಸ್ತಕಗಳನ್ನು ನೀಡಿ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಹಾರ-ತುರಾಯಿ, ಶಾಲು-ಶಲ್ಯದ ಬದಲಿಗೆ ಪುಸ್ತಕಗಳನ್ನು ನೀಡಿ: ಮುಖ್ಯಮಂತ್ರಿ ಸಿದ್ಧರಾಮಯ್ಯ

112
0

ಬೆಂಗಳೂರು, ಮೇ 21: ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯವಾಗುತ್ತದೆ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ನೂತನ ಮುಖ್ಯಮಂತ್ರಿ ಹೇಳಿದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದು ಶ್ಲಾಘನೆಗೆ ಒಳಗಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಹೂವುಗಳನ್ನು ನೀಡಿ ಸ್ವಾಗತಿಸುವ ಬದಲಿಗೆ ಪುಸ್ತಕಗಳನ್ನು ನೀಡಿ ಎಂದು ಹೇಳಿದನ್ನು ಇಲ್ಲಿ ಸ್ಮರಿಸಬಹುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.