ಬೆಂಗಳೂರು, ಜ.20: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ನೂತನವಾಗಿ ತಾಂತ್ರಿಕ ಸಹಾಯಕ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ಸಾರಿಗೆ ಮತ್ತು ಮುಜುರಾಯಿ ಸಚಿವರಾದ ರಾಮಲಿಂಗಾರೆಡ್ಡಿ ನೇಮಕಾತಿ ಆದೇಶವನ್ನು ವಿತರಿಸಿದರು. ಬಳಿಕ ಮಾತನಾಡಿದ ಅವರು, ಸಂಪೂರ್ಣ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ನಡೆಸಿದ್ದು, ಸುಮಾರು 8 ವರ್ಷಗಳ ನಂತರ ನೇಮಕಾತಿ ನಡೆಸಲಾಗಿದೆ. ಅಭ್ಯರ್ಥಿಗಳಿಗೆ ಅವರಿಚ್ಚೆಯಂತೆಯೆ ಘಟಕಗಳನ್ನು ಸಹ ಆರಿಸಿಕೊಳ್ಳಲು ಗಣಕೀಕರಣದ ಮೂಲಕ ಅವಕಾಶ ಕಲ್ಪಿಸಲಾಗಿದೆ. 2016 ರಿಂದ ಇಲ್ಲಿಯವರೆಗೆ 13,888 ಸಿಬ್ಬಂದಿಗಳು ನಿವೃತ್ತಿ ಇತರೆ ಕಾರಣಗಳಿಂದ ತೆರವಾಗಿರುವ ಹುದ್ದೆಯನ್ನು ಭರ್ತಿ ಮಾಡಿರಲಿಲ್ಲ. ಇದರಿಂದ ಬಸ್ಸುಗಳ ಸಮರ್ಪಕ ಕಾರ್ಯಚರಣೆಗೆ ತೊಂದರೆಯುಂಟಾಗುತ್ತಿತ್ತು. ಸದರಿ ನೇಮಕಾತಿ ಸ್ವಲ್ಪ ಮಟ್ಟಿಗೆ ನಿಗಮಕ್ಕೆ ಸಹಕಾರಿಯಾಗಲಿದೆ. ನೇಮಕಗೊಂಡಿರುವ ಸಿಬ್ಬಂದಿಗಳು ಶ್ರಮವಹಿಸಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ನಿಗಮಕ್ಕೆ ಕೀರ್ತಿ ತರುವ ಭರವಸೆ ನನಗಿದೆ ಎಂದರು. ವಿ. ಅನ್ಬುಕುಮಾರ್, ಡಾ. ನಂದಿನಿದೇವಿ. ಕೆ., ಡಾ. ಲತಾ, ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.
ತಾಂತ್ರಿಕ ಸಹಾಯಕ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣೆ
ತಾಂತ್ರಿಕ ಸಹಾಯಕ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣೆ
Date: