Monday, November 16, 2026
Monday, November 16, 2026

ಬಾಲಕಾರ್ಮಿಕ ಪದ್ಧತಿ ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ

ಬಾಲಕಾರ್ಮಿಕ ಪದ್ಧತಿ ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ

Date:

ಧಾರವಾಡ, ನ.16: ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟಲು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅವಶ್ಯಕವಾಗಿದೆ. 1986ರ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಗೆ 2016ರಲ್ಲಿ ತಿದ್ದುಪಡಿ ತರಲಾಗಿದ್ದು, ಅದರ ಪ್ರಕಾರ 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದು ಹಾಗೂ 14 ವರ್ಷ ಮೇಲ್ಪಟ್ಟು 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ಯಮಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್. ಆರ್. ಅವರು ಹೇಳಿದರು.

ಅವರು ಇಂದು (ನ.16) ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ (ರಿ) ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸುತ್ತದೆ. ಅಲ್ಲದೆ, ಅವರ ಶಿಕ್ಷಣ ಮತ್ತು ಸರ್ವಾಂಗೀಣ ಪ್ರಗತಿಗೆ ಅಡ್ಡಿಯಾಗುತ್ತದೆ. ಶಿಕ್ಷಣದಿಂದ ವಂಚಿತರಾಗಿ ದುಡಿಮೆಯಲ್ಲಿ ತೊಡಗಿರುವ ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರಲು ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕಾಗಿದೆ ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.

ಉಚಿತ ಮತ್ತು ಕಡ್ಡಾಯ ಶಿಕ್ಷಣ ಪ್ರತಿಯೊಂದು ಮಗುವಿನ ಹಕ್ಕಾಗಿದ್ದು, ಅದನ್ನು ಪ್ರತಿ ಮಗುವಿಗೂ ದೊರಕಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅಧಿಕಾರಿಗಳಿಗೆ ಹೇಳಿದರು.
ಶಾಲೆಗಳು ಹಾಗೂ ಕಾರ್ಖಾನೆಗಳ ಮುಖ್ಯ ಸೂಚನಾ ಫಲಕಗಳಲ್ಲಿ ಬಾಲಕಾರ್ಮಿಕ ಪದ್ಧತಿ ವಿರುದ್ಧದ ಜಾಗೃತಿ ಸಂದೇಶಗಳನ್ನು ಅಳವಡಿಸಬೇಕು. ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಾಗಿ ಸಂಚರಿಸುವ ಸ್ಥಳಗಳಲ್ಲಿ ಜಾಗೃತಿ ಫಲಕಗಳನ್ನು ಅಳವಡಿಸುವ ಮೂಲಕ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಅರಿವು ಮೂಡಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅಲ್ಲಪ್ಪ ಎಂ.ಬಡಿಗೇರ ಅವರು ಮಾತನಾಡಿ. ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಶಿಕ್ಷಣ ಒದಗಿಸುವ ಉದ್ದೇಶದಿಂದ ಸ್ಕೂಲ್ ಆನ್ ವ್ಹೀಲ್ ಯೋಜನೆ ಜಾರಿಗೊಳಿಸಿದ್ದು ಹಿಂದುಳಿದ ಪ್ರದೇಶದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಮನೆಗೆ ಬಸ್‍ನಲ್ಲಿಯೆ ಭೇಟಿ ನೀಡಿ ಈ ಬಸ್‍ನಲ್ಲಿ ಒಬ್ಬ ಶಿಕ್ಷಕರಿಂದ ಮಕ್ಕಳಿಗೆ ಶಿಕ್ಷಣವನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.

ಜಾಗೃತಿ ಮೂಡಿಸುವ ಪೋಸ್ಟರ್ ಬಿಡುಗಡೆ: ಜಿಲ್ಲಾಧಿಕಾರಿ ಸ್ನೇಹಲ್.ಆರ್ ಅವರು ಸಭೆಯಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸುವ ಪೋಸ್ಟರ್ ಬಿಡುಗಡೆ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪರಶುರಾಮ ಎಫ್. ಕೆ., ಹಿರಿಯ ಕಾರ್ಮಿಕ ನಿರೀಕ್ಷಕರಗಳಾದ ಅಕ್ರಮ ಅಲ್ಲಾಪುರ, ಸಂಗೀತಾ ಬೆನಕನಕೊಪ್ಪ, ಮಿನಾಕ್ಷಿ ಸಿಂದಹಟ್ಟಿ, ಭುವನೇಶ್ವರಿ ಕೋಟಿಮಠ ಸೇರಿದಂತೆ ಸಿಬ್ಬಂದಿಗಳು ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲಾವಿದರೆಂದರೆ ಕಲಾತಪಸ್ವಿಗಳು: ಪೇಜಾವರ ಶ್ರೀ

ಉಡುಪಿ, ನ.16: ತಮ್ಮ ಬದುಕನ್ನೇ ಯಕ್ಷಗಾನಕ್ಕೆ ಮುಡಿಪಾಗಿಟ್ಟು ಕಲಾರಸಿಕರನ್ನು ರಂಜಿಸಿ ಯಕ್ಷಗಾನವನ್ನು...

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹಕ್ಕೆ ಚಾಲನೆ

ಉಡುಪಿ, ನ.16: ನಗರದ ಕವಿ ಮುದ್ದಣ ಮಾರ್ಗದಲ್ಲಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆಯ...

ಪೀಡಿಯಾಟ್ರಿಕ್ ಕಾರ್ಡಿಯಾಲಜಿ – ಬ್ಯಾಕ್ ಟು ಬೇಸಿಕ್ಸ್ ವಿಷಯದಲ್ಲಿ 17ನೇ ಮಣಿಪಾಲ ಕಾರ್ಡಿಯಾಲಜಿ ಅಪ್‌ಡೇಟ್

ಮಣಿಪಾಲ, ನ.16: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಹೃದ್ರೋಗ ವಿಭಾಗವು...
error: Content is protected !!