Monday, April 20, 2026
Monday, April 20, 2026

ಪಿಪಿಪಿ) ಮಾದರಿಯಲ್ಲಿ ಮಂಗಳೂರಿನಲ್ಲಿ ಐಟಿ ಪಾರ್ಕ್

ಪಿಪಿಪಿ) ಮಾದರಿಯಲ್ಲಿ ಮಂಗಳೂರಿನಲ್ಲಿ ಐಟಿ ಪಾರ್ಕ್

Date:

ಬೆಳಗಾವಿ, ಡಿ.14: ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಮಂಗಳೂರಿನಲ್ಲಿ ಐಟಿ ಪಾರ್ಕ್ ವಾಣಿಜ್ಯ ಕಛೇರಿ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದೆ ಎಂದು ಐಟಿ ಮತ್ತು ಬಿಟಿ ಸಚಿವರಾದ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು.

ಡಿಸೆಂಬರ್‌ 15 ರಂದು ಟೆಂಡರ್ ಬಿಡ್ ತರೆಯಲಾಗುತ್ತದೆ. ನಂತರ ಅಗತ್ಯಬಿದ್ದರೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಟೆಂಡರ್ ಮಾರ್ಗಸೂಚಿಯಲ್ಲಿ ಬದಲಾವಣೆ ತರಲು ಸರ್ಕಾರ ಸಿದ್ಧವಿದೆ.

ಮಂಗಳೂರು, ಉಡುಪಿ ಹಾಗೂ ಮಣಿಪಾಲ್ ನಗರಗಳನ್ನು ಕೇಂದ್ರವಾಗಿಸಿಕೊಂಡು, ಸ್ಥಳೀಯವಾಗಿ ಐಟಿ ಹಾಗೂ ಬಿಟಿ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಹೆಚ್ಚಿಸಲು ಸರ್ಕಾರ ಮುಂದಡಿ ಇಟ್ಟಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಐಟಿ ಉದ್ಯಮಿಗಳು, ಶಿಕ್ಷಣ ಕ್ಷೇತ್ರದ ಪ್ರಮುಖರು, ಕ್ರೆಡಾಯ್ (ಕರ್ನಾಟಕ ರಿಯಲ್ ಎಸ್ಟೇಟ್ ಡೆವಲ್‍ಪರ್ಸ್ ಅಸೋಸಿಯೇಷನ್) ಸೇರಿದಂತೆ ಎಲ್ಲಾ ಭಾಗಿದಾರರೊಂದಿಗೆ ಚರ್ಚಿಸಿ ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದೆ. ಇದರ ಅನುಸಾರ ವಾಣಿಜ್ಯ ಕಚೇರಿ ಟೆಕ್‍ಪಾರ್ಕ್ ನಿರ್ಮಿಸುವ ಟೆಂಡರ್‌ದಾರರಿಗೆ ವಿನ್ಯಾಸ ನಿರ್ಮಾಣ, ಹಣಕಾಸು ಕಾರ್ಯಾಚರಣೆ ಮತ್ತು ವರ್ಗಾವಣೆಗೆ 30 ವರ್ಷಗಳ ಅವಧಿಗೆ ಸರ್ಕಾರ ಭೂಮಿಯನ್ನು ಗುತ್ತಿಗೆ ನೀಡಲಾಗುತ್ತದೆ. ಈ ಗುತ್ತಿಗೆ ಅವಧಿಯ ನಂತರ ಮುಂದಿನ 30 ವರ್ಷಗಳಿಗೆ ವಿಸ್ತರಿಸಲು ಅವಕಾಶವಿದೆ.

ಮಂಗಳೂರಿನ ಇತರೆ ಖಾಸಗಿ ಟೆಕ್ ಕಂಪನಿಗಳು ಸಹ ಕಚೇರಿಗಳನ್ನು ನಿರ್ಮಾಣ ಮಾಡುತ್ತಿವೆ. ಇಲ್ಲಿ ಟೆಕ್ ಕಂಪನಿಗಳಿಗೆ ಸರ್ಕಾರಿ ದರಕ್ಕಿಂತಲೂ ಕಡಿಮೆ ಮೊತ್ತದಲ್ಲಿ ಬಾಡಿಗೆ ವಿಧಿಸುತ್ತಿವೆ ಎನ್ನುವ ಮಾಹಿತಿಯಿದೆ. ಆದರೆ ಸರ್ಕಾರದ ವಾಣಿಜ್ಯ ಕಚೇರಿ ಟೆಕ್ ಪಾರ್ಕ್‍ನಲ್ಲಿ ಜಾಗ ಪಡೆಯುವ ಕಂಪನಿಗಳಿಗೆ ಕೌಶಲ್ಯ ತರಬೇತಿ, ನೋಂದಣಿ ಹಾಗೂ ಟೆಕ್ ಸಮಾವೇಶಗಳಲ್ಲಿ ವೇದಿಕೆ ಕಲ್ಪಿಸುವ ಮೂಲಕ ಜಾಗತಿಕ ಮನ್ನಣೆ ದೊರಕಿಸಲು ಸರ್ಕಾರ ಸಹಾಯ ಮಾಡಲಿದೆ. ಆದ್ದರಿಂದ ಖಾಸಗಿ ಕಂಪನಿಗಳು ಸರ್ಕಾರದ ವಾಣಿಜ್ಯ ಕಚೇರಿ ಟೆಕ್ ಪಾರ್ಕ್‍ನಲ್ಲಿ ಕಾರ್ಯಾರಂಭ ಮಾಡುವ ವಿಶ್ವಾಸವಿದೆ.

ಹಸಿರು ಇಂಧನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಡೆನ್ಮಾರ್ಕ್ ದೇಶದ ಗಲ್ಫ್ ರಿಸರ್ಚ್ ಕಂಪನಿ ಮಂಗಳೂರಿನಿಂದಲೇ ಕಾರ್ಯನಿರ್ವಹಿಸುತ್ತಿದೆ. ಮುಂಬರುವ ದಿನಗಳಲ್ಲಿ ಮಂಗಳೂರು ಸಹ ಐಟಿ ಬಿಟಿ ಕ್ಷೇತ್ರದಲ್ಲಿ ಪ್ರಮುಖ ನಗರವಾಗಿ ಬೆಳೆಯಲಿದೆ. ಇದೇ ಮಾದರಿಯಲ್ಲಿ ರಾಜ್ಯದ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಳ್ಳಾರಿ, ಕಲಬುರಗಿ ನಗರಗಳಲ್ಲಿಯೂ ಖಾಸಗಿ ಸಹಭಾಗಿತ್ವದಲ್ಲಿ ಐಟಿ ಬಿಟಿ ಟೆಕ್ ಪಾರ್ಕ್‍ಗಳ ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವರು ತಿಳಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೇಶಾದ್ಯಂತ ಎಲ್‌ಪಿಜಿ ಸರಬರಾಜು ಸ್ಥಿರ: ಸರ್ಕಾರ

ನವದೆಹಲಿ, ಏ.20: ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ಉಂಟಾದ ಅಡೆತಡೆಗಳ ನಡುವೆಯೂ, ದೇಶಾದ್ಯಂತ...

ಬಿ.ಬಿ. ಹೆಗ್ಡೆ ಕಾಲೇಜು: ಹ್ಯಾಕಥಾನ್ ಕಾರ್ಯಕ್ರಮ

ಕುಂದಾಪುರ, ಏ.20: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಉಡುಪಿ ಜಿಲ್ಲಾಸ್ಪತ್ರೆಗೆ ಎರಡು ಹವಾನಿಯಂತ್ರಕಗಳ ಹಸ್ತಾಂತರ

ಉಡುಪಿ, ಏ.19: ಉಡುಪಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಗೆ ಶಾಸಕ ಯಶ್ಪಾಲ್ ಸುವರ್ಣ...

ಕೊಡಿಬೆಟ್ಟು: ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ; ಉದ್ಘಾಟನೆ

ಕಾಪು, ಏ.19: ಕಾಪು ವಿಧಾನಸಭಾ ಕ್ಷೇತ್ರದ ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ...
error: Content is protected !!