ಬೆಂಗಳೂರು, ಮಾ.12: ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಭಾರತ್ ಜೋಡೋ ಸಭಾಂಗಣದಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಮತ್ತು ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ತನ್ಮೂಲಕ ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿಯಲ್ಲಿದ್ದ ಜಯಪ್ರಕಾಶ್ ಹೆಗ್ಡೆ ಅವರು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಎಂದು ಮೂಲಗಳಿಂದ ತಿಳಿದುಬಂದಿದೆ. ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಂಧನ ಸಚಿವರಾದ ಕೆ.ಜೆ. ಜಾರ್ಜ್, ಮುಂತಾದವರು ಉಪಸ್ಥಿತರಿದ್ದರು.
ಕಾಂಗ್ರೆಸ್ ಪಕ್ಷಕ್ಕೆ ಮರಳಿದ ಜಯಪ್ರಕಾಶ್ ಹೆಗ್ಡೆ, ಸುಕುಮಾರ್ ಶೆಟ್ಟಿ

ಕಾಂಗ್ರೆಸ್ ಪಕ್ಷಕ್ಕೆ ಮರಳಿದ ಜಯಪ್ರಕಾಶ್ ಹೆಗ್ಡೆ, ಸುಕುಮಾರ್ ಶೆಟ್ಟಿ
Date: