Home ಸುದ್ಧಿಗಳು ರಾಜ್ಯ ಪೆನ್ ಡ್ರೈವ್ ಪ್ರಕರಣ: ಜೆಡಿಎಸ್ ಪಕ್ಷದಿಂದ ಸಂಸದ ಪ್ರಜ್ವಲ್ ರೇವಣ್ಣ ಅಮಾನತು

ಪೆನ್ ಡ್ರೈವ್ ಪ್ರಕರಣ: ಜೆಡಿಎಸ್ ಪಕ್ಷದಿಂದ ಸಂಸದ ಪ್ರಜ್ವಲ್ ರೇವಣ್ಣ ಅಮಾನತು

227
0

ಬೆಂಗಳೂರು, ಏ.30: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾದ ಎರಡು ದಿನಗಳ ನಂತರ ಅವರನ್ನು ಮಂಗಳವಾರ ಜನತಾ ದಳ (ಜಾತ್ಯತೀತ) ಪಕ್ಷದಿಂದ ಅಮಾನತುಗೊಳಿಸಲಾಗಿದೆ. ರಾಜ್ಯ ಸರ್ಕಾರದ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ತನಿಖೆ ಪೂರ್ಣಗೊಳಿಸುವವರೆಗೆ ಹಾಸನ ಸಂಸದ ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಸ್ವಾಗತಿಸುತ್ತೇವೆ. ಎಸ್‌ಐಟಿ ತನಿಖೆ ಪೂರ್ಣಗೊಳ್ಳುವವರೆಗೆ ಅವರನ್ನು ಪಕ್ಷದಿಂದ ಅಮಾನತುಗೊಳಿಸಲು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಶಿಫಾರಸು ಮಾಡಲು ನಾವು ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.