Wednesday, October 28, 2026
Wednesday, October 28, 2026

ಸರ್ಕಾರಿ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಸಲು ಸೂಚನೆ

ಸರ್ಕಾರಿ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಸಲು ಸೂಚನೆ

Date:

ಬೆಂಗಳೂರು, ಜೂ.26: ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು. ಈ ಸೂಚನೆಯನ್ನು ಉಲ್ಲಂಘಿಸಿದವರ ವಿರುದ್ಧ ವೈಯಕ್ತಿಕವಾಗಿ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಲ್ಲ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಕನ್ನಡದಲ್ಲಿಯೇ ಉತ್ತರಿಸಲು ಸೂಚನೆ- ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲೇ ಉತ್ತರಿಸಬೇಕು, ಸರ್ಕಾರಿ ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು, ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನ ಸೆಳೆಯುವ ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಬೇಕು, ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರೆ ಎಲ್ಲ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಬೇಕು, ಕಚೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡುವಂತೆ, ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ ಇರಬೇಕು, ಕೇಂದ್ರ ಸರ್ಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ ಉಳಿದೆಲ್ಲ ಪತ್ರ ವ್ಯವಹಾರಗಳು ಕಡ್ಡಾಯವಾಗಿ ಕನ್ನಡದಲ್ಲೇ ಇರಬೇಕು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರನೇ ಟಿ20: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

ಯು.ಬಿ.ಎನ್.ಡಿ., ಅ.27: ವೆಲ್ಲಿಂಗ್ಟನ್‌ನಲ್ಲಿ ಮಂಗಳವಾರ ನಡೆದ ಮೂರನೇ ಟಿ20 ಪಂದ್ಯದಲ್ಲಿ, ಆತಿಥೇಯ...

ಅಂತಿಮ ಮತದಾರರ ಪಟ್ಟಿಯ ಸಿ.ಡಿ ಹಸ್ತಾಂತರ

ಮಣಿಪಾಲ, ಅ.27: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ – 2026...

ಅ. 30: ನೇರ ಸಂದರ್ಶನ

ಉಡುಪಿ, ಅ.27: ಮಂಗಳೂರು ಫರ‍್ಸ್, ಉಡುಪಿ ನೀಯರ್ ಕಲ್ಯಾಣ್‌ಪುರ ಉಪ್ಪೂರು ಬಿಡ್ಜ್,...

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನೆ

ಕಾರ್ಕಳ, ಅ.27: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ರಾಷ್ಟ್ರೀಯ ಸೇವಾ ಯೋಜನೆ,...
error: Content is protected !!